ಧರ್ಮಸ್ಥಳಕ್ಕೆ ಹೊರಟವರು ಸೇರಿದ್ದು ಮಸಣಕ್ಕೆ – ಕೊಟ್ಟಿಗೆಹಾರ ಬಳಿ ಭೀಕರ ಆ್ಯ*ಕ್ಸಿಡೆಂಟ್

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್‌ವೊಂದರ ಮುಂಭಾಗದಲ್ಲಿ ರಸ್ತೆ ಬದಿಯಲ್ಲಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ನಿಲ್ಲಿಸಲಾಗಿತ್ತು. ಈ ವೇಳೆ ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಯುವತಿ ಮನೆಯಿಂದ ಯವಕನ ಮೇಲೆ ಅ*ಟ್ಯಾಕ್
ಅಪಘಾತದಲ್ಲಿ ಮೃತಪಟ್ಟವರನ್ನು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪ್ರೇಮ್ ಕುಮಾರ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು ಎಂದು ತಿಳಿದುಬಂದಿದೆ. ಐವರು ಸ್ನೇಹಿತರು ಕಾರಿನಲ್ಲಿ ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ನೋಡಿರಿ

