ಗೋವಾದಿಂದ ಬೆಂಗಳೂರಿಗೆ ಬರ್ತಿದ್ದ ಬಸ್ ಭೀಕರ ಅ*ಪಘಾತ – ಒರ್ವ ಸಾ*ವು, 20 ಮಂದಿಗೆ ಗಂಭೀರ ಗಾಯ

ಗೋವಾದಿಂದ ಬೆಂಗಳೂರಿಗೆ ಬರ್ತಿದ್ದ ಬಸ್ ಭೀಕರ ಅ*ಪಘಾತ – ಒರ್ವ ಸಾ*ವು, 20 ಮಂದಿಗೆ ಗಂಭೀರ ಗಾಯ

ಹಾವೇರಿ ನಗರದ ಹೊರವಲಯದಲ್ಲಿ ಗೋವಾದಿಂದ ಬೆಂಗಳೂರಿಗೆ ಬರ್ತಿದ್ದ ಬಸ್​ ಭೀಕರ ಅಪಘಾತಕ್ಕೀಡಾಗಿದೆ. ಬಸ್ ಪಲ್ಟಿಯಾದ  ಪರಿಣಾಮ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ್ರೆ, ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಹಾವೇರಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. 18 ವರ್ಷದ ಬಾವರಸಿಂಗ್ ರಜಪೂತ್ ಮೃತ ಪ್ರಯಾಣಿಕ.

ಇದನ್ನೂ ಓದಿ: ತಮಿಳುನಾಡು ಸಿಎಂ ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ವಾಪಸ್ ಪಡೆದಿದ್ದೇಕೆ? – ಸಂಗೀತಾ ನಿರ್ಧಾರಕ್ಕೆ ಇದೇ ಕಾರಣ!

ಹೆದ್ದಾರಿಯಲ್ಲಿ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಅನೇಕ ಪ್ರಯಾಣಿಕರು ಇದ್ದು, ಇದರಲ್ಲಿ 20  ಪ್ರಯಾಣಿಕರು  ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ತಕ್ಷಣ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ವರದಿ ಸಿಕ್ಕ ತಕ್ಷಣ ಹಾವೇರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಸ್ ಅನ್ನು ಬೇರೆ ಕಡೆಗೆ ಸ್ಥಳಾಂತರಿಸಿದ್ದಾರೆ.  ಈ ಪ್ರಕರಣ ಹಾವೇರಿ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನೋಂದಾಯಿಸಲಾಗಿದೆ. ಪೊಲೀಸರು ದುರ್ಘಟನೆಯ ಕಾರಣವನ್ನು ತನಿಖೆ ನಡೆಸುತ್ತಿದ್ದಾರೆ.

  ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಬಸ್ ಪಲ್ಟಿಯಾದ ಸ್ಥಳದಲ್ಲಿ ಸಾಕಷ್ಟು ಹಾನಿ ಉಂಟಾಗಿದೆ. ಪ್ರಯಾಣಿಕರು ಗಾಬರಿಯಲ್ಲಿ ಇದ್ದರು. ಸ್ಥಳೀಯರು ಮತ್ತು ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

Kishor KV

Leave a Reply

Your email address will not be published. Required fields are marked *