ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ರೈಡ್ – ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವ್ ಪತ್ತೆ

ಪರಪ್ಪನ ಅಗ್ರಹಾರದಲ್ಲಿ ಸಿಸಿಬಿ ರೈಡ್ – ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್‌, ಪೆನ್‌ಡ್ರೈವ್ ಪತ್ತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆಯಾಗಿದೆ. ನಿನ್ನೆ ಸಿಸಿಬಿ ಅಧಿಕಾರಿಗಳು ನಡೆಸಿದ ದಿಢೀರ್ ಪರಿಶೀಲನೆ ವೇಳೆ  ಮೊಬೈಲ್ ಪತ್ತೆಯಾಗಿದ್ದು,  ಜೈಲಿನಲ್ಲಿ ವಿಐಪಿ ಸೌಲಭ್ಯದ ಹಲವು ಪ್ರಶ್ನೆಗಳು ಹುಟ್ಟು ಹಾಕಿದೆ.

ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ ಹಾಗೂ ಡಿಸಿಪಿಗಳಾದ ಶ್ರೀಹರಿಬಾಬು, ರಾಜಾ ಇಮಾಮ್ ಕಾಸಿಂ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದರು. ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸತತವಾಗಿ ನಡೆದ ಶೋಧ ಕಾರ್ಯದಲ್ಲಿ ಪ್ರತಿಯೊಂದು ಬ್ಯಾರಕ್ ಅನ್ನು ಇಂಚಿಂಚಾಗಿ ಪರಿಶೀಲನೆ ಮಾಡಲಾಗಿದೆ. ಈ ವೇಳೆ ಬಟ್ಟೆಗಳ ನಡುವೆ ಅಡಗಿಸಿ ಇಟ್ಟುಕೊಂಡಿದ್ದ ಆಂಡ್ರಾಯ್ಡ್ ಫೋನ್, ಪೆನ್‌ಡ್ರೈವ್‌ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿದಂತೆ ಪ್ರಮುಖ ರೌಡಿಗಳು ಹಾಗೂ ವಿಐಪಿ ಕೈದಿಗಳ ಬ್ಯಾರಕ್‌ಗಳಲ್ಲೂ ಶೋಧ ಕಾರ್ಯ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: RAP*E ಕೇಸ್.. ಅಭಿಷೇಕ್ ಪೊರೆಲ್ ಅರೆಸ್ಟ್ – ಕರ್ನಾಟಕದ ಯುವತಿಗೆ ಮೋಸ ಮಾಡಿದ್ರಾ?

ಪ್ರಜ್ವಲ್ ರೇವಣ್ಣ ಅವರೊಂದಿಗೆ ಮತ್ತೊಬ್ಬ ಸಜಾಬಂಧಿ ಕೈದಿ ಪ್ರತಾಪ್ ರೈ ಎಂಬಾತ ಕೂಡ ಅದೇ ಬ್ಯಾರಕ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಮೊಬೈಲ್ ಪತ್ತೆಯಾದಾಗ ಪ್ರಜ್ವಲ್ ರೇವಣ್ಣ ತಮಗೇನೂ ತಿಳಿಯದಂತೆ ತಟಸ್ಥರಾಗಿ ಕುಳಿತಿದ್ದರೆನ್ನಲಾಗಿದೆ. ಆದರೆ, ಅತ್ಯಂತ ಕಟ್ಟುನಿಟ್ಟಿನ ಭದ್ರತೆ ಇರುವ ವಿಐಪಿ ಬ್ಯಾರಕ್‌ಗೆ ಆಂಡ್ರಾಯ್ಡ್ ಫೋನ್ ತಂದುಕೊಟ್ಟವರು ಯಾರು? ಎಷ್ಟು ದಿನಗಳಿಂದ ಇದನ್ನು ಬಳಕೆ ಮಾಡಲಾಗುತ್ತಿತ್ತು? ಎಂಬ ಪ್ರಶ್ನೆಗಳು ಮೂಡಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಜ್ವಲ್ ಇದ್ದ ಜೈಲಿನಲ್ಲಿ ವಸ್ತುಗಳು ಪತ್ತೆಯಾದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ. ಪ್ರಜ್ವಲ್ ಜೊತೆಗೆ ಬ್ಯಾರಕ್ ನಲ್ಲಿ ಪ್ರತಾಪ್ ರೈ ಎಂಬ ಕೈದಿ ವಿರುದ್ಧವೂ ಪ್ರಕರಣ ದಾಖಲಾಗಿದೆ. ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಾಗಿದ್ದು ಪ್ರಜ್ವಲ್ ಎ1 ಮಾಡಲಾಗಿದೆ.

ಸಿಸಿಬಿ ಸತತ 6 ಗಂಟೆಗಳ ಕಾಲ ದರ್ಶನ್, ಪವಿತ್ರಗೌಡ, ಪ್ರಜ್ವಲ್ ರೇವಣ್ಣ ಸೇರಿದಂತೆ ಎಲ್ಲಾ ವಿಐಪಿ ಖೈದಿಗಳ ಬ್ಯಾರಕ್‌ನಲ್ಲಿ ಶೋಧ ನಡೆಸಿದ್ದಾರೆ. ಈ ವೇಳೆ ಪ್ರಜ್ವಲ್ ರೇವಣ್ಣ ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದ ಅಂಡ್ರ‍್ಯಾಯ್ಡ್ ಮೊಬೈಲ್ ಪತ್ತೆಯಾಗಿದೆ

Kishor KV

Leave a Reply

Your email address will not be published. Required fields are marked *