ಶಿಕ್ಷಣ ಸಂಸ್ಥೆಗಳಲ್ಲಿ ಋತುಚಕ್ರದ ರಜೆ – ಪ್ರಸ್ತಾವನೆ ಬಗ್ಗೆ ಕೇಂದ್ರ ಹೇಳಿದ್ದೇನು?

ಶಿಕ್ಷಣ ಸಂಸ್ಥೆಗಳಲ್ಲಿ ಋತುಚಕ್ರದ ರಜೆ – ಪ್ರಸ್ತಾವನೆ ಬಗ್ಗೆ ಕೇಂದ್ರ ಹೇಳಿದ್ದೇನು?

ನವದೆಹಲಿ: ಋತುಚಕ್ರದ ರಜೆ ವಿಚಾರ ಶಿಕ್ಷಣ ಸಂಸ್ಥೆಗಳಲ್ಲಿ ಪದೇ ಪದೆ ಚರ್ಚೆಗೆ ಒಳಗಾಗುತ್ತಿದೆ. ಕೆಲ ದಿನಗಳ ಹಿಂದೆ ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟದ ಒತ್ತಾಯದ ಮೇರೆಗೆ ವಿದ್ಯಾರ್ಥಿನಿಯರಿಗೆ ಋತುಚಕ್ರದ ವೇಳೆ ರಜೆ ನೀಡುವುದಾಗಿ ಘೋಷಿಸಿತ್ತು. ಇದಾದ ಬಳಿಕ ಕೆಲ ಕಾಲೇಜುಗಳಲ್ಲೂ ಋತುಚಕ್ರದ ವೇಳೆ ರಜೆ ನೀಡಬೇಕೆಂಬ ಕೂಗು ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು ದೇಶದ ಶಿಕ್ಷಣ ಸಂಸ್ಥೆಗಳಲ್ಲಿ ಋತುಚಕ್ರದ ವೇಳೆ ರಜೆ ನೀಡುವುದರ ಬಗ್ಗೆ ಕಾನೂನು ಜಾರಿ ಮಾಡುವ ಪ್ರಸ್ತಾಪ ಇಲ್ಲ ಎಂದಿದೆ.

ಇದನ್ನೂ ಓದಿ: ಕ್ಯಾನ್ಸರ್ ಪೀಡಿತೆಯನ್ನು ವಿಮಾನದಿಂದ ಕೆಳಗಿಳಿಸಿದ ಸಿಬ್ಬಂದಿ – ದೆಹಲಿಯಲ್ಲಿ ಅಮಾನವೀಯ ವರ್ತನೆ

ಈ ವಿಚಾರವಾಗಿ ಲೋಕಸಭೆಗೆ ಲಿಖಿತ ಉತ್ತರ ನೀಡಿರುವ ಶಿಕ್ಷಣ ಖಾತೆ ಸಹಾಯಕ ಸಚಿವ ಸುಭಾಸ್‌ ಸರ್ಕಾರ್, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಋತುಚಕ್ರದ ವೇಳೆ ರಜೆ ನೀಡುವ ವಿಚಾರದಲ್ಲಿ ಕಾನೂನು ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ಯುಜಿಸಿ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರಿಗೆ ಸುರಕ್ಷಿತ ವಾತಾವರಣಕ್ಕಾಗಿ ಮೂಲ ಸೌಕರ್ಯಗಳು ಮತ್ತು ಸೌಕರ್ಯಗಳಿಗಾಗಿ ಮಾರ್ಗಸೂಚಿಗಳನ್ನು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಚಯಿಸಿದೆ. ಕಾಲೇಜಿನಲ್ಲಿ ಪ್ಯಾಡ್ ವಿಲೇವಾರಿ ತೊಟ್ಟಿಗಳು ಮತ್ತು ಸ್ಯಾನಿಟರಿ ಪ್ಯಾಡ್‌ ವೆಂಡಿಂಗ್‌ ಯಂತ್ರಗಳನ್ನು ಸ್ಥಾಪಿಸಬೇಕು. 24 ಗಂಟೆ ಟ್ಯಾಪ್ ನೀರು ಸರಬರಾಜು, ಸಾಬೂನು, ಮುಚ್ಚಿದ ಡಸ್ಟ್‌ಬಿನ್‌ಗಳು, ಪ್ರತ್ಯೇಕ ವಿಶ್ರಾಂತಿ ಕೊಠಡಿಗಳಂತಹ ಮೂಲಭೂತ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿದೆ ಎಂದು ಹೇಳಿದ್ದಾರೆ.

 

suddiyaana