ಚಾಮರಾಜನಗರದಲ್ಲಿ ಬೇಟೆಗೆ ಹೋದವರೇ ಬೇಟೆಯಾದ್ರು – ಮೂವರನ್ನ ಏನ್‌ಕೌಂಟರ್‌ನಲ್ಲಿ ಕೊ*ದ ಅರಣ್ಯ ಇಲಾಖೆ

ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ವನ್ಯಜೀವಿಗಳ ಬೇಟೆಗೆ ಕಾಡಿಗೆ ನುಗ್ಗಿದ್ದ ಬೇಟೆಗಾರರು ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಈ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ತೆರಳಿದ್ದ ವೇಳೆ, ಬೇಟೆಗಾರರು ಏಕಾಏಕಿ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ವೈಭವ್ ಆಟಕ್ಕೆ ಭಜ್ಜಿ ಬ್ರೇಕ್! – ಅಟ್ಯಾಕ್ ಮಾಡಿದ್ರೆ ವಿಕೆಟ್ ಬೀಳುತ್ತಾ?
ಮೃತರನ್ನು ಅಂತೋಣಿಸ್ವಾಮಿ, ಪೀಟರ್ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಒಬ್ಬ ಅರಣ್ಯ ಸಿಬ್ಬಂದಿಗೂ ಗಾಯವಾಗಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಮತ್ತೊಬ್ಬ ಬೇಟೆಗಾರ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ.

ನೋಡಿರಿ

