ಪದೋನ್ನತಿ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ – ಹಿರಿಯ ವಕೀಲೆ ವಿಕ್ಟೋರಿಯಾ ಗೌರಿ ಪ್ರಮಾಣವಚನ!

ಪದೋನ್ನತಿ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ – ಹಿರಿಯ ವಕೀಲೆ ವಿಕ್ಟೋರಿಯಾ ಗೌರಿ ಪ್ರಮಾಣವಚನ!

ಹಿರಿಯ ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಮದ್ರಾಸ್ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಗೌರಿಯವರ ನೇಮಕಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ನೀಡಿದೆ. ವಿಕ್ಟೋರಿಯಾ ಗೌರಿಯವರನ್ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿದ ಆದೇಶವನ್ನ ಹಿಂಪಡೆಯುವಂತೆ ಆಗ್ರಹಿಸಿ ಮದ್ರಾಸ್ ಹೈಕೋರ್ಟ್​ನ ಕೆಲ ಬಾರ್ ಸದಸ್ಯರು ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ : ಮುಗಿಯುತ್ತಿಲ್ಲ ರಾಖಿ ಮದುವೆ ಗೋಳು – ಆದಿಲ್ ಜೊತೆ ಈಗ ಸಂಸಾರವೂ ಹಾಳು

ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿಯವರನ್ನ ಮದ್ರಾಸ್ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿರುವುದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇವತ್ತು ನಡೆದಿದೆ. ಬೆಳಗ್ಗೆ 10.25ರ ಸುಮಾರಿಗೆ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ನಡೆದಿದ್ದು, ಗೌರಿ ಅವರ ವಿರುದ್ಧದ ಆರೋಪವನ್ನ ಕೈಬಿಟ್ಟು ಅರ್ಜಿ ವಜಾಗೊಳಿಸಲಾಯಿತು. ಸುಪ್ರೀಂ ಆದೇಶ ಬಂದ 5 ನಿಮಿಷಗಳ ಬಳಿಕ ಮದ್ರಾಸ್ ಹೈಕೋರ್ಟ್​ನಲ್ಲಿ ಬೆಳಗ್ಗೆ 10.30ಕ್ಕೆ ಗೌರಿಯವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.

ಪದೋನ್ನತಿ ವಿರುದ್ಧದ ಅರ್ಜಿಯನ್ನ ಫೆಬ್ರವರಿ 10ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಈ ಹಿಂದೆ ಒಪ್ಪಿಗೆ ನೀಡಿತ್ತು. ಆದ್ರೆ ತುರ್ತು ವಿಚಾರಣೆ ನಡೆಸಲು ಎರಡನೇ ಬಾರಿಗೆ ಕೋರಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಇಂದು ವಿಚಾರಣೆ ನಡೆಸಿತು. ಅಂತಿಮವಾಗಿ ಗೌರಿಯವರ ಪದೋನ್ನತಿ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಕ್ರೈಸ್ತರು ಮತ್ತು ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಗೌರಿ ಅವರನ್ನು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲು ಕೇಂದ್ರ ಸರ್ಕಾರ ಮಾಡಿದ ಶಿಫಾರಸನ್ನು ಹಿಂಪಡೆಯುವಂತೆ ಕೋರಿ ಮದ್ರಾಸ್ ಹೈಕೋರ್ಟ್‌ನ ಕೆಲ ಬಾರ್ ಸದಸ್ಯರು ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದರು. ಗೌರಿ ಅವರು ಬಿಜೆಪಿಗೆ ಸೇರಿದ್ದಾರೆ ಎಂಬ ಆರೋಪದ ವರದಿಗಳ ನಂತರ ಅವರ ಪ್ರಸ್ತಾಪಿತ ಉನ್ನತಿ ವಿವಾದಕ್ಕೆ ಕಾರಣವಾಗಿತ್ತು.

suddiyaana