ಪಿಲ್ಲರ್ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾ*ವು!- ಇಂಜಿನಿಯರ್‌ಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಶಾಲೆ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 4ನೇ ತರಗತಿ ವಿದ್ಯಾರ್ಥಿ ಧನುಷ್ (10) ಎಂಬುವವನು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳಗಿಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮೃತ ಧನುಷ್ ಮತ್ತಿಘಟ್ಟದ ಆನಂದಮೂರ್ತಿ ಅವರ ಪುತ್ರ. ಇಂದು ಬೆಳಿಗ್ಗೆ ಶಾಲೆ ಆರಂಭಕ್ಕೂ ಮುನ್ನ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: KPSC ಅಕ್ರಮ ಕೇಸ್ – ಶಿವಶಂಕರಪ್ಪ ಸಾಹುಕಾರ್ ಮನೆ ಹಾಗೂ KPSC ಕಚೇರಿ ಮೇಲೆ ED ರೈಡ್
ಇಂದು ಬೆಳಗ್ಗೆ 9.30 ರ ಸುಮಾರಿಗೆ ಈ ಘಟನೆ ನಡೆದಿದೆ. ನಂದಿನಿ ಡೈರಿ ಕಟ್ಟಡದ ಪಿಲ್ಲರ್ ಕುಸಿದು ಧನುಷ್ ತಲೆ ಮೇಲೆ ಬಿದ್ದಿದೆ. ಪಿಲ್ಲರ್ ಬಿದ್ದ ರಭಸಕ್ಕೆ ವಿದ್ಯಾರ್ಥಿ ಧನುಷ್ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಗೆ ಡೈರಿ ಇಂಜಿಯರ್ಗಳೇ ಜವಾಬ್ದಾರಿ ಎಂದು ಗ್ರಾಮಸ್ಥರು ಆಕ್ರೊಶ ಹೊರಹಾಕಿದ್ದಾರೆ. ಕಳಪೆ ಗುಣಮಟ್ಟದ ಕಾಮಗಾರಿಯೇ ಇದಕ್ಕೆ ಕಾರಣವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಹಂದನಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಟ್ಟಡದ ಕಾಮಗಾರಿ ಕಳಪೆಯಾಗಿದ್ದರಿಂದಲೇ ಪಿಲ್ಲರ್ ಕುಸಿದಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ

ನೋಡಿರಿ

