ಶ್ರೀಲಂಕಾ ಮೇಲೆ ಭಾರತ ಸವಾರಿ – ಲಂಕಾಗೆ ಫಾಲೋಆನ್ ಹೇರಿದ ಟೀಮ್ ಇಂಡಿಯಾ

ಶ್ರೀಲಂಕಾ ಮೇಲೆ ಭಾರತ ಸವಾರಿ – ಲಂಕಾಗೆ ಫಾಲೋಆನ್ ಹೇರಿದ ಟೀಮ್ ಇಂಡಿಯಾ

ಟೀಮ್ ಇಂಡಿಯಾ ಎರಡನೇ ಟೆಸ್ಟ್‌ನಲ್ಲಿ ಶ್ರೀಲಂಕಾ ಮೇಲೆ ಸವಾರಿ ಮಾಡಿದೆ. ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶ್ರೀಲಂಕಾ ತಂಡ 290 ರನ್‌ಗಳಿಗೆ ಆಲೌಟ್ ಆಗಿದೆ. ಲಂಕಾ ಮೇಲೆ ಭಾರತ ಫಾಲೋ ಆನ್ ಹೇರಿದೆ.

ಇದನ್ನೂ ಓದಿ:INDಗೆ 2 ವಿಕೆಟ್.. SLಗೆ 39 ರನ್ಸ್ – Follow-On ಟಾಸ್ಕ್ ಗೆಲ್ಲೋದ್ಯಾರು?

ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೂಡಾ ಭಾರತವೇ ಮೇಲುಗೈ ಸಾಧಿಸುತ್ತಿದೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ಈಗಾಗಲೇ 1-0 ಮುನ್ನಡೆಯಲ್ಲಿರುವ ಭಾರತ ತಂಡ, ಈ ಪಂದ್ಯದಲ್ಲೂ ಜಯ ಸಾಧಿಸುವುದು ನಿಶ್ಚಿತ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯುತ್ತಿರುವ ಈ ಟೆಸ್ಟ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 503 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡ 290 ರನ್‌ಗಳಿಗೆ ಆಲೌಟ್ ಆಯಿತು.

ಮೊದಲ ಇನಿಂಗ್ಸ್‌ನಲ್ಲಿ 213 ರನ್‌ಗಳ ಭರ್ಜರಿ ಮುನ್ನಡೆ ಪಡೆದ ಟೀಮ್ ಇಂಡಿಯಾ, ಇದೀಗ ಶ್ರೀಲಂಕಾ ತಂಡಕ್ಕೆ ಫಾಲೋಆನ್ ಹೇರಿದೆ. ಅದರಂತೆ ಲಂಕಾ ಪಡೆ ತನ್ನ ದ್ವಿತೀಯ ಇನಿಂಗ್ಸ್ ಆರಂಭಿಸಿದೆ. ಒಂದು ವೇಳೆ ಶ್ರೀಲಂಕಾ ತಂಡವನ್ನು ಎರಡನೇ ಇನಿಂಗ್ಸ್‌ನಲ್ಲಿ 213 ರನ್‌ಗಳ ಒಳಗಾಗಿ ಆಲೌಟ್ ಮಾಡಿದರೆ, ಭಾರತ ತಂಡ ಇನಿಂಗ್ಸ್ ಜಯ ಸಾಧಿಸಲಿದೆ. ಈಗಾಗಲೇ ಶ್ರೀಲಂಕಾ 63 ರನ್ ಗಳಿಸಿ 2 ವಿಕೆಟ್ ಕಳೆದುಕೊಂಡಿದೆ.

Sulekha

Leave a Reply

Your email address will not be published. Required fields are marked *