ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಾಗೇಂದ್ರ – ಸಿಎಂಗೆ ರಾಜೀನಾಮೆ ಸಲ್ಲಿಸಿದ ಬಿ ನಾಗೇಂದ್ರ

ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಾಗೇಂದ್ರ  – ಸಿಎಂಗೆ ರಾಜೀನಾಮೆ ಸಲ್ಲಿಸಿದ ಬಿ ನಾಗೇಂದ್ರ
ಸಚಿವ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜ್ಯಪಾಲರ ಅಂಗೀಕಾರವೊಂದೇ ಬಾಕಿ ಇದೆ. ರಾಜ್ಯಪಾಲರ ಅಂಗೀಕಾರಕ್ಕೆ ರಾಜೀನಾಮೆ ಪತ್ರ ಕಳಿಸಿ ಕೊಡಬೇಕಿದೆ.
ಸರ್ಕಾರಕ್ಕೆ ಮತ್ತು ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಉಂಟಾಗಬಾರದು ಎಂಬ ಉದ್ದೇಶದಿಂದ ನಾಗೇಂದ್ರ ಅವ್ರು  ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ. ರಾತ್ರಿಯೇ ನಾಗೇಂದ್ರ ಅವರು ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ನಾಗೇಂದ್ರ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೋ ಅಥವಾ ತಿರಸ್ಕರಿಸಿ ಅವರನ್ನು ಸಚಿವ ಸಂಪುಟದಲ್ಲಿಯೇ ಮುಂದುವರಿಸಬೇಕೋ ಎಂಬ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಗೊಂದಲದಲ್ಲಿದ್ದಾರೆ.
ನಾಗೇಂದ್ರ ಅವರ ರಾಜೀನಾಮೆಯನ್ನು ಅಂಗೀಕರಿಸಿದರೆ ರಾಜಕೀಯವಾಗಿ ಆಗುವ ಲಾಭ ಮತ್ತು ನಷ್ಟಗಳ ಕುರಿತು ಪಕ್ಷದ ವರಿಷ್ಠರು ಸೂಕ್ಷ್ಮ ಲೆಕ್ಕಾಚಾರ ನಡೆಸುತ್ತಿದ್ದು, ಈವರೆಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

Kishor KV

Leave a Reply

Your email address will not be published. Required fields are marked *