ಸೆಪ್ಟೆಂಬರ್ 4ರಂದು ಮೀನು ಮಾಂಸ ಸಿಗಲ್ಲ – ನಾನ್‌ವೆಜ್‌ ಪ್ರಿಯರೇ ಈ ಸುದ್ದಿ ನೋಡಿ..!

ಸೆಪ್ಟೆಂಬರ್ 4ರಂದು ಮೀನು ಮಾಂಸ ಸಿಗಲ್ಲ – ನಾನ್‌ವೆಜ್‌ ಪ್ರಿಯರೇ ಈ ಸುದ್ದಿ ನೋಡಿ..!

ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಂದು ಮಾಂಸ ಮಾರಾಟ ನಿಷೇಧಿಸಲಾಗಿದೆ.

ಇದನ್ನೂ ಓದಿ:ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನಾಗೇಂದ್ರ – ಸಿಎಂಗೆ ರಾಜೀನಾಮೆ ಸಲ್ಲಿಸಿದ ಬಿ ನಾಗೇಂದ್ರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಈ ಬಾರಿ ಸೆಪ್ಟೆಂಬರ್ ನಾಲ್ಕರಂದು ಹಬ್ಬವನ್ನು ಆಚರಿಸಲಾಗುತ್ತದೆ. ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಮೈಸೂರು ನಗರದಲ್ಲಿ ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಹೀಗಾಗಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 4ರಂದು ಕುರಿ, ಮೇಕೆ, ಕೋಳಿ, ಹಂದಿ ಮಾಂಸ ಹಾಗೂ ಮೀನು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಗರದ ಎಲ್ಲಾ ಮಾಂಸ ಮಾರಾಟ ಮಾಡುವ ಅಂಗಡಿಗಳನ್ನ ಕಡ್ಡಾಯವಾಗಿ ಮುಚ್ಚುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಹಬ್ಬದ ದಿನದಂದು ನಗರದಲ್ಲಿ ಯಾವುದೇ ರೀತಿಯ ಅಶಾಂತಿ ಉಂಟಾಗದಂತೆ ಮತ್ತು ಧಾರ್ಮಿಕ ಭಾವನೆಗಳಿಗೆ ಗೌರವ ಸೂಚಿಸುವ ಉದ್ದೇಶದಿಂದ ಈ ಮಹತ್ವದ ಕ್ರಮ ಜರುಗಿಸಲಾಗಿದೆ ಎಂದು ಮೈಸೂರು ಮಹಾ ನಗರ ಪಾಲಿಕೆ ಸ್ಪಷ್ಟಪಡಿಸಿದೆ.

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಎಲ್ಲಾ ಮಾಂಸದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನು ಮಾರುಕಟ್ಟೆಗಳು ಹಾಗೂ ಪಾಲಿಕೆಗೆ ಸೇರಿದ ಕುರಿ ಮತ್ತು ಮೇಕೆಗಳ ಕಸಾಯಿಖಾನೆಯು ಸೆಪ್ಟೆಂಬರ್ 4ರಂದು ಸಂಪೂರ್ಣವಾಗಿ ಬಂದ್ ಇರಲಿವೆ. ವ್ಯಾಪಾರಿಗಳು ಮತ್ತು ಅಂಗಡಿ ಮಾಲೀಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಆದೇಶ ಮೀರಿ ಅಂಗಡಿ ತೆರೆಯುವಂತಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ. ಒಂದು ವೇಳೆ ಪಾಲಿಕೆಯ ಈ ಆದೇಶವನ್ನು ಉಲ್ಲಂಘಿಸಿ ಯಾರಾದರೂ ರಹಸ್ಯವಾಗಿ ಮಾಂಸ ಮಾರಾಟ ಮಾಡಲು ಮುಂದಾದರೆ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Sulekha

Leave a Reply

Your email address will not be published. Required fields are marked *