ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ಕೊಲೆ – ಜನರ ಎದುರೇ ಕೊ*ಚ್ಚಿ ಕೊ*ಚ್ಚಿ ಕೊಂದ ಪಾಪಿಗಳು!

ಹಾಡಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ: ನೇಪಾಳದಲ್ಲಿ ಹುಡುಕಿದ್ದಷ್ಟು ಸಿಗುತ್ತಿವೆ ಹೆ*ಣಗಳು – ಸಾವಿನ ಸಂಖ್ಯೆ 584ಕ್ಕೆ ಏರಿಕೆ, 2,482ಕ್ಕೂ ಹೆಚ್ಚು ಜನ ನಾಪತ್ತೆ
ಹುಬ್ಬಳಿಯ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ಈ ಭೀಕರ ಕೊಲೆ ನಡೆದಿದ್ದು, ಸಿದ್ದೇಶ್ವರ ಪಾರ್ಕ್ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಬಳಿಕ ಜನರ ಎದುರೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.ಹತ್ಯೆಯಾದ ವ್ಯಕ್ತಿಯನ್ನು ದಾದಾಪೀರ್ ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಗರದ ಸಿದ್ದೇಶ್ವರ ಪಾರ್ಕ್ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಬಳಿಕ ಜನರ ಎದುರೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹತ್ಯೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಕೊಲೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಹತ್ಯೆಯಾದ ವ್ಯಕ್ತಿ ಬಗ್ಗೆಯೂ ಮಾಹಿತಿ ಗೊತ್ತಾಗಿಲ್ಲ ಎಂದಿದ್ದಾರೆ.

ನೋಡಿರಿ

