ರಾಜ್ಯದ ಲಕ್ಷಾಂತರ ಕುಟುಂಬಗಳು ಆತಂಕದಲ್ಲಿವೆ – ಕಸ್ತೂರಿ ರಂಗನ್ ವರದಿ ಜಾರಿಗೆ ನಾವು ಬಿಡಲ್ಲವೆಂದ ಪರಮೇಶ್ವರ್

ರಾಜ್ಯದ ಲಕ್ಷಾಂತರ ಕುಟುಂಬಗಳು  ಆತಂಕದಲ್ಲಿವೆ – ಕಸ್ತೂರಿ ರಂಗನ್ ವರದಿ ಜಾರಿಗೆ ನಾವು ಬಿಡಲ್ಲವೆಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿ ಜಾರಿಗೆ ನಾವು ಬಿಡಲ್ಲ ಅಂತ ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಕೇಂದ್ರ ಸರಕಾರ ಹೊರಡಿಸಿರುವ ಜನವಿರೋಧಿ ಅಧಿಸೂಚನೆ ನಮ್ಮ ಸರಕಾರ ಖಂಡಿಸುತ್ತದೆ. ಯಾವುದೇ ಕಾರಣಕ್ಕೂ ವರದಿ ಜಾರಿಗೆ ಅವಕಾಶ ನೀಡಬಾರದು ಎಂಬ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶದ 10 ಜಿಲ್ಲೆಗಳ 1449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಘೋಷಿಸಿ ಕೇಂದ್ರ ಹೊರಡಿಸಿರುವ ಈ ಅಧಿಸೂಚನೆಯು ರಾಜ್ಯದ ಲಕ್ಷಾಂತರ ಕುಟುಂಬಗಳನ್ನು ತೀವ್ರ ಆತಂಕಕ್ಕೆ ಈಡುಮಾಡಿದೆ. ಹೀಗಾಗಿ ನಾವು ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳ ಜನರ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಕೇಂದ್ರದ ನಿರ್ಣಯದ ಬಗ್ಗೆ ಚರ್ಚೆ ನಡೆಸಿ, ಪರಿಹಾರ ಕಂಡುಕೊಳ್ಳಲು ಒಂದು ದಿನದ ವಿಶೇಷ ಅಧಿವೇಶನ ಕರೆಯಲು ಸಹ ನಿರ್ಧಾರ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಿಗೆ ನೇಪಾಳಕ್ಕೆ ಭಾರತದ ನೆರವು – ವಿಶೇಷ ಸುರಂಗ ರಕ್ಷಣಾ ತಂಡ ಕಳುಹಿಸಲು ಸಿದ್ಧತೆ

ಶತಮಾನಗಳಿಂದ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಅಲ್ಲಿನ ಪ್ರಕೃತಿ ಯೊಂದಿಗೆ ಸಮತೋಲಿತ ಜೀವನ ಶೈಲಿಯನ್ನು ಅಳವಡಿಸಿಕೊಂಡು, ತಮ್ಮ ಸುತ್ತಲಿನ ಪರಿಸರ ಗೌರವಿಸುತ್ತಲೇ ಬದುಕು ಕಟ್ಟಿಕೊಂಡಿದ್ದಾರೆ. ಮನುಷ್ಯ ಮತ್ತು ಪರಿಸರದ ನಡುವಿನ ಈ ಅನ್ಯೋನ್ಯ ಭಾವವೇ ಇಂದಿಗೂ ಪಶ್ಚಿಮ ಘಟ್ಟಗಳ ಜೀವಂತಿಕೆಯನ್ನು ಹಿಡಿದಿಟ್ಟಿದೆ. ಹೀಗಿರುವಾಗ ಇದ್ದಕ್ಕಿದ್ದಂತೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಜನರನ್ನು ಒಕ್ಕಲೆಬ್ಬಿಸಲು ಹೊರಡುವುದು ಜೀವವಿರೋಧಿ, ಅಮಾನವೀಯ ನಡೆಯಾಗುತ್ತದೆ ಎಂದಿದ್ದಾರೆ.

ಕೇಂದ್ರ ಸರಕಾರಕ್ಕೆ ಪರಿಸರ ಸಂರಕ್ಷಣೆ ಮಾಡುವ ನೈಜ ಕಾಳಜಿ ಇದ್ದಲ್ಲಿ, ಪಶ್ಚಿಮ ಘಟ್ಟ ಪ್ರದೇಶಗಳ ಗ್ರಾಮಗಳಲ್ಲಿ ತಲೆಮಾರುಗಳಿಂದ ವಾಸಮಾಡುತ್ತಿರುವ ಜನರ ಆತಂಕ, ಅಹವಾಲುಗಳನ್ನು ಆಲಿಸಬೇಕು. ಹಾಗೆಯೇ ರಾಜ್ಯದ ಜೊತೆ ಅಗತ್ಯ ಚರ್ಚೆ ನಡೆಸಿ, ಎಲ್ಲರೂ ಒಪ್ಪುವಂತಹ ಒಮ್ಮತದ ನಿರ್ಣಯಕ್ಕೆ ಬರಬೇಕು.

Kishor KV

Leave a Reply

Your email address will not be published. Required fields are marked *