ದುನಿಯಾ ವಿಜಯ್ ಜೊತೆ ನಾಗರತ್ನ ವಿಚ್ಛೇದನಕ್ಕೆ ಕೋರ್ಟ್ ಅಸ್ತು – ಪತ್ನಿಗೆ 2 ಕೋಟಿ ರೂ. ಜೀವನಾಂಶ

ಸ್ಯಾಂಡಲ್‌ವುಡ್ ಸಲಗ ದುನಿಯಾ ವಿಜಯ್ ಹಾಗೂ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನ ಅಂತ್ಯಗೊಂಡಿದೆ. ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ವಿಚ್ಛೇದನಕ್ಕೆ ಅಸ್ತು ಎಂದಿದೆ. ಪತ್ನಿ ಹಾಗೂ ಮೂವರು ಮಕ್ಕಳ ಭವಿಷ್ಯ ಮತ್ತು ವಿಜಯ್ ಅವರ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ, ನಾಗರತ್ನ ಅವರಿಗೆ 2 ಕೋಟಿ ಜೀವನಾಂಶ ನೀಡುವಂತೆ ಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ:ಮಾಫಿ ಸಾಕ್ಷಿ ಶಾಕ್ ನಡುವೆ ದರ್ಶನ್‌ಗೆ ಮತ್ತೊಂದು ಶಾಕ್ – ದರ್ಶನ್ ಜೊತೆ ಇರಲ್ಲವೆಂದು ಇಬ್ಬರು ಆರೋಪಿಗಳು ಅರ್ಜಿ
ನಟ ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಸುದೀರ್ಘ ದಾಂಪತ್ಯ ಜೀವನ ಕಾನೂನಾತ್ಮಕವಾಗಿ ಅಂತ್ಯ ಕಂಡಿದೆ. ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರನ್ನೊಳಗೊಂಡ ಉನ್ನತ ನ್ಯಾಯಪೀಠವು ಈ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ತೀರ್ಪು ನೀಡಿದೆ. ವಿಚ್ಛೇದನ ಮಂಜೂರು ಮಾಡುವ ಜೊತೆಗೆ, ಪತ್ನಿ ನಾಗರತ್ನ ಅವರಿಗೆ 2 ಕೋಟಿ ರೂಪಾಯಿಗಳ ಜೀವನಾಂಶ ಪಾವತಿಸುವಂತೆ ನಟ ದುನಿಯಾ ವಿಜಯ್ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಪತ್ನಿ ಹಾಗೂ ಮೂವರು ಮಕ್ಕಳ ಭವಿಷ್ಯ ಮತ್ತು ಅವರ ಜೀವನ ನಿರ್ವಹಣೆಯ ಪ್ರಮುಖ ಅಂಶವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಇದರೊಂದಿಗೆ ನಟ ದುನಿಯಾ ವಿಜಯ್ ಅವರ ಪ್ರಸ್ತುತ ಸಾಮಾಜಿಕ ಸ್ಥಾನಮಾನ, ವೃತ್ತಿಪರ ಗಳಿಕೆ ಹಾಗೂ ಹಣಕಾಸಿನ ಸ್ಥಿತಿಗತಿಗಳನ್ನು ಕೂಲಂಕುಷವಾಗಿ ಪರಾಮರ್ಶಿಸಿ 2 ಕೋಟಿ ಜೀವನಾಂಶದ ಮೊತ್ತವನ್ನು ನಿಗದಿಪಡಿಸಲಾಗಿದೆ ಎಂದು ಪೀಠ ತಿಳಿಸಿದೆ.
ನ್ಯಾಯಮೂರ್ತಿಗಳಾದ ಡಿಕೆ ಸಿಂಗ್ ಹಾಗು ಶಾಂತಿಭೂಷಣ್ ರ ವಿಭಾಗೀಯ ಪೀಠದಿಂದ ಆದೇಶ ಹೊರಬಂದಿದೆ. ಮೂರು ತಿಂಗಳ ಒಳಗೆ ಒನ್ ಟೈಂ ಸೆಟ್ಲ್ ಮೆಂಟ್ ಆಗಿ ನಾಗರತ್ನಗೆ ಜೀವನಾಂಶ ನೀಡುವಂತೆ ಆದೇಶ ನೀಡಲಾಗಿದೆ. ಅಲ್ಲದೆ ಮೂವರು ಮಕ್ಕಳ ಸಂಪೂರ್ಣ ಜವಬ್ದಾರಿ ದುನಿಯಾ ವಿಜಯ್ ಹೊರುವಂತೆ ಆದೇಶದಲ್ಲಿ ತಿಳಿಸಲಾಗಿದೆ. ನಾಗರತ್ನ ಅವರಿಗೆ ಸ್ವಂತ ಮನೆ ಇದ್ದು ಒಂದು ಮನೆ ಬಾಡಿಗೆ ಬರುತ್ತಿದೆ ಅಂತಾ ವಿಜಯ್ ಪರ ವಕೀಲರು ವಾದಿಸಿದ್ದರು.
ವಿಜಯ್-ನಾಗರತ್ನ 1999ರಲ್ಲಿ ಮದುವೆಯಾಗಿದ್ದರು. ಮದುವೆಯಾಗಿ ಭರ್ತಿ 27 ವರ್ಷಗಳಾಗಿವೆ. 2013ರಲ್ಲಿ ದುನಿಯಾ ವಿಜಯ್ ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ 2014ರಲ್ಲಿ ಇಬ್ಬರೂ ಮತ್ತೆ ಒಂದಾದರು. ಆ ನಂತರ ದುನಿಯಾ ವಿಜಯ್ ಅವರು 2018ರಲ್ಲಿ ಮತ್ತೆ ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದರು.

ನೋಡಿರಿ

