ಗಣೇಶೋತ್ಸವದ ಸಂಭ್ರಮದ ನಡುವೆ ದುರಂತ! -KSRTC ಬಸ್ ಡಿಕ್ಕಿಗೆ ಮೂವರು ಯುವಕರು ಬ*ಲಿ!

ಗಣೇಶೋತ್ಸವದ ಸಂಭ್ರಮದ ನಡುವೆ ದುರಂತ! -KSRTC ಬಸ್ ಡಿಕ್ಕಿಗೆ ಮೂವರು ಯುವಕರು ಬ*ಲಿ!

ಗಣೇಶ ಮೆರವಣಿಗೆ ನೋಡಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಮೂವರು ಯುವಕರು ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಗೆ ಬಲಿಯಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಗಣೇಶ ಮೆರವಣಿಗೆ ಮುಗಿಸಿಕೊಂಡು ಮೂವರು ಯುವಕರು ಒಂದೇ ಬೈಕ್‌ನಲ್ಲಿ ಮನೆ ಕಡೆಗೆ ತೆರಳುತ್ತಿದ್ದರು. ಇದೇ ವೇಳೆ ಸವದತ್ತಿಯಿಂದ ಧಾರವಾಡದತ್ತ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಬಸ್ ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮೃತರನ್ನು ಸವದತ್ತಿ ಪಟ್ಟಣದ ನಿವಾಸಿಗಳಾದ ವಿನೋದ್ ಹೊಗೆನ್ನವರ, ವಯಸ್ಸು 22 ವರ್ಷ, ಆಕಾಶ್ ಜಾಧವ್, ವಯಸ್ಸು 20 ವರ್ಷ ಹಾಗೂ ರವಿ ಕುರುಬರ, ವಯಸ್ಸು 22 ವರ್ಷ ಎಂದು ಗುರುತಿಸಲಾಗಿದೆ.

ಗಣೇಶ ಮೆರವಣಿಗೆ ನೋಡಿ ಸಂತೋಷದಿಂದ ಮನೆಗೆ ಮರಳುತ್ತಿದ್ದ ಯುವಕರು ದುರಂತ ಅಂತ್ಯ ಕಂಡಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರ ಆಕ್ರೋಶ ಮತ್ತು ನೋವಿಗೆ ಕಾರಣವಾಗಿದೆ. ಘಟನೆಯಿಂದ ಮೂರು ಕುಟುಂಬಗಳಲ್ಲಿ ಶೋಕ ಮಡುಗಟ್ಟಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ. ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Kishor KV

Leave a Reply

Your email address will not be published. Required fields are marked *