ಬೆಂಗಳೂರಿನಲ್ಲಿ ಪತ್ನಿ ಮೇಲೆ ಆ್ಯ*ಸಿಡ್ ದಾ*ಳಿ! ಮ*ಚ್ಚಿನಿಂದ ಕೊ*ಚ್ಚಿ ಕೊ*ಲೆಗೆ ಯತ್ನ

ಬೆಂಗಳೂರಿನ ಜೆಪಿ ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪದ ಘಟನೆ ನಡೆದಿದೆ. ನಾರಾಯಣ ಕ್ಲೀನಿಕ್ ಬಳಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಹಲ್ಲೆಗೊಳಗಾದ ಮಹಿಳೆಯನ್ನು 26 ವರ್ಷದ ಮಧುಮಿತ ಎಂದು ಗುರುತಿಸಲಾಗಿದೆ. ಮೂಲತಃ ಕೊಲ್ಕತ್ತಾ ಮೂಲದವರಾಗಿರುವ ಮಧುಮಿತ, ಕಳೆದ ಸುಮಾರು ಒಂದೂವರೆ ವರ್ಷದಿಂದ ಜೆಪಿ ನಗರದ ನಾರಾಯಣ ಕ್ಲೀನಿಕ್ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ತೆರಳಿದ್ದ ವೇಳೆ ಅವರ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ: ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್!
ಆರೋಪಿಯು ಮೊದಲು ಮಧುಮಿತ ಅವರ ಮೇಲೆ ಆ್ಯಸಿಡ್ ಎರಚಿದ್ದು, ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ದಾಳಿಯಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಗೆ ನಿಖರ ಕಾರಣವೇನು, ದಾಳಿಯ ಹಿಂದೆ ವೈಯಕ್ತಿಕ ವಿಚಾರವಿದೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದು ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುವ ಸಾಧ್ಯತೆಯಿದೆ.
ಈ ಘಟನೆ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಆತಂಕ ಮೂಡಿಸಿದೆ. ಪೊಲೀಸರು ಪ್ರಕರಣದ ಸಂಪೂರ್ಣ ಹಿನ್ನೆಲೆ ಹಾಗೂ ಆರೋಪಿಯ ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ನೋಡಿರಿ

