3ನೇ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ – ಸರಣಿ ಕ್ಲೀನ್‌ಸ್ವೀಪ್

3ನೇ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಜಯ – ಸರಣಿ ಕ್ಲೀನ್‌ಸ್ವೀಪ್

 

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ, ಸೆಪ್ಟೆಂಬರ್ 17ರಂದು ನಡೆದ ಮೂರು ಪಂದ್ಯಗಳ T20I ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡ ಅಫ್ಘಾನಿಸ್ತಾನವನ್ನು ಬರೋಬ್ಬರಿ 127 ರನ್‌ಗಳಿಂದ ಸೋಲಿಸಿ ಸರಣಿಯನ್ನು 3–0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿದೆ.

ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್‌ಗೆ ಇಳಿದು 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 221 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಭಾರತದ ಪರ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 34 ಎಸೆತಗಳಲ್ಲಿ 108 ರನ್‌ಗಳ ಭರ್ಜರಿ ಶತಕ ಸಿಡಿಸಿದರು. ಈ ಇನ್ನಿಂಗ್ಸ್‌ನಲ್ಲಿ ಅವರು 9 ಬೌಂಡರಿ ಹಾಗೂ 11 ಸಿಕ್ಸರ್‌ಗಳನ್ನು ಬಾರಿಸಿದರು. ಸಂಜು ಸ್ಯಾಮ್ಸನ್ ಕೂಡ 35 ಎಸೆತಗಳಲ್ಲಿ 50 ರನ್‌ಗಳ ಅರ್ಧಶತಕ ದಾಖಲಿಸಿ ತಂಡದ ಮೊತ್ತ ಹೆಚ್ಚಿಸಲು ನೆರವಾದರು.

ಇದನ್ನೂ ಓದಿ: ಅಜಿತ್ ಅಗರ್ಕರ್ ಗೆ ಗೇಟ್ ಪಾಸ್ – HITಮ್ಯಾನ್ ಕೆಣಕಿದ್ದೇ ಮುಳುವಾಯ್ತಾ?

221 ರನ್‌ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನದ ಬ್ಯಾಟಿಂಗ್ ಭಾರತೀಯ ಬೌಲರ್‌ಗಳ ಮುಂದೆ ಸಂಪೂರ್ಣವಾಗಿ ಕುಸಿಯಿತು. ಕೇವಲ 14.1 ಓವರ್‌ಗಳಲ್ಲಿ ಅಫ್ಘಾನಿಸ್ತಾನ 94 ರನ್‌ಗಳಿಗೆ ಆಲೌಟ್ ಆಯಿತು.

ರವಿ ಬಿಷ್ಣೋಯಿ ಮತ್ತು ನಿತೀಶ್ ಕುಮಾರ್ ರೆಡ್ಡಿ ತಲಾ ಮೂರು ವಿಕೆಟ್ ಪಡೆದು ಮಿಂಚಿದರೆ, ಅಕ್ಷರ್ ಪಟೇಲ್ ಎರಡು ವಿಕೆಟ್ ಪಡೆದರು.

ಈ 127 ರನ್‌ಗಳ ಗೆಲುವಿನೊಂದಿಗೆ ಭಾರತ ಪುರುಷರ T20I ಕ್ರಿಕೆಟ್‌ನಲ್ಲಿ 100ಕ್ಕೂ ಹೆಚ್ಚು ರನ್‌ಗಳ ಅಂತರದಲ್ಲಿ 10ನೇ ಗೆಲುವು ದಾಖಲಿಸಿದೆ.

ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದು 3–0 ಅಂತರದಲ್ಲಿ ಸರಣಿ ಗೆದ್ದು ಅಫ್ಘಾನಿಸ್ತಾನಕ್ಕೆ ವೈಟ್‌ವಾಶ್ ನೀಡಿದೆ.

Kishor KV

Leave a Reply

Your email address will not be published. Required fields are marked *