ಹಾಸನಾಂಬೆಯ ದರ್ಶನಕ್ಕೆ ಮುಹೂರ್ತ ಫಿಕ್ಸ್ – 12 ದಿನಗಳ ಕಾಲ ದೇವಿ ದರ್ಶನಕ್ಕೆ ಸಿದ್ಧತೆ

ಹಾಸನಾಂಬೆಯ ದರ್ಶನಕ್ಕೆ ಮುಹೂರ್ತ ಫಿಕ್ಸ್ – 12 ದಿನಗಳ ಕಾಲ ದೇವಿ ದರ್ಶನಕ್ಕೆ ಸಿದ್ಧತೆ

ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನಕ್ಕೆ ಮುಹೂರ್ತ ನಿಗದಿಯಾಗಿದೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ಗರ್ಭಗುಡಿಯ ಬಾಗಿಲು ಅಕ್ಟೋಬರ್ 29ರಂದು ತೆರೆಯಲಿದೆ.

ಇದನ್ನೂ ಓದಿ:ರೈಲಿನಲ್ಲಿ ತೇಜಸ್ವಿ ಸೂರ್ಯ ಪತ್ನಿಗೆ ಕಹಿ ಅನುಭವ!- ಸಾರ್ವಜನಿಕರ ವರ್ತನೆಗೆ ಶಿವಶ್ರೀ ಬೇಸರ

ಹಾಸನಾಂಬೆಯ ದೇಗುಲದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 29, 2026ರಂದು ತೆರೆಯಲಿದೆ. ನವೆಂಬರ್ 11ರವರೆಗೆ ದೇಗುಲದ ಬಾಗಿಲು ತೆರೆದಿರುತ್ತದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ, ಒಟ್ಟು 12 ದಿನಗಳ ಕಾಲ, ಅಂದರೆ ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕಳೆದ ವರ್ಷ 23 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದರು. ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಸುಗಮ ದರ್ಶನಕ್ಕಾಗಿ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ನವೆಂಬರ್ 11ರಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಗರ್ಭಗುಡಿಯ ಬಾಗಿಲು ಮುಚ್ಚಲಾಗುತ್ತದೆ. ಹಾಸನಾಂಬಾ ಜಾತ್ರಾ ಮಹೋತ್ಸವದ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಹಾಗೂ ವೆಬ್‌ಸೈಟ್ ಅನ್ನು ಸೆಪ್ಟೆಂಬರ್ 26ರಂದು ಬಿಡುಗಡೆ ಮಾಡಲಾಗುತ್ತದೆ.

Sulekha

Leave a Reply

Your email address will not be published. Required fields are marked *