ಮುಖ್ಯಮಂತ್ರಿಯಾದ ನಂತರ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು – ಸಿಎಂ ಡಿಕೆ ಶಿವಕುಮಾರ್

ಮುಖ್ಯಮಂತ್ರಿಯಾದ ನಂತರ ನನ್ನನ್ನೇ  ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು – ಸಿಎಂ ಡಿಕೆ ಶಿವಕುಮಾರ್

ಕರ್ನಾಟಕ ರಾಜಕಾರಣದಲ್ಲಿ ಇದೀಗ ಮತ್ತೊಂದು ಸ್ಫೋಟಕ ಚರ್ಚೆ ಶುರುವಾಗಿದೆ. ಖಾಸಗಿ ಸ್ಟಿಂಗ್ ಆಪರೇಷನ್‌ಗಳ ಸಾಧ್ಯತೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲೇ ಸಚಿವರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದರು ಎನ್ನಲಾಗಿತ್ತು. ಇದರ ಬೆನ್ನಲ್ಲೇ ಇದೀಗ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿಯಾದ ನಂತರ ತಮ್ಮನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ರಾಜಕೀಯವಾಗಿ ತಮ್ಮ ವಿರುದ್ಧ ಹಲವು ರೀತಿಯ ತಂತ್ರಗಳು ನಡೆಯುತ್ತಿವೆ. ಯಾರಾದರೂ ಉದ್ದೇಶಪೂರ್ವಕವಾಗಿ ಮಾತನಾಡಿಸಿ, ಅದನ್ನು ರೆಕಾರ್ಡ್ ಮಾಡಿ ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಬಹುದು ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾಕ್ಕೆ ರೈಲ್ವೆ ಇಲಾಖೆ ಗುಡ್‌ನ್ಯೂಸ್ – ಬೆಂಗಳೂರು–ಮೈಸೂರು ನಡುವೆ ಹೆಚ್ಚುವರಿ ವಿಶೇಷ ರೈಲು

ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸಚಿವರಿಗೆ ಸ್ಟಿಂಗ್ ಆಪರೇಷನ್ ಬಗ್ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಆರೋಪ ಕೇಳಿಬಂದಿರುವುದು ಕುತೂಹಲ ಹೆಚ್ಚಿಸಿದೆ.

ಇನ್ನು ಡಿಕೆ ಶಿವಕುಮಾರ್ ಆರೋಪಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರು ಮಾಡಿರುವ ಆರೋಪಗಳಿಗೆ ಸ್ಪಷ್ಟತೆ ನೀಡಬೇಕು. ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ, ಸ್ಟಿಂಗ್ ಆಪರೇಷನ್, ಟ್ರ್ಯಾಪ್ ಮತ್ತು ರಾಜಕೀಯ ಆರೋಪ-ಪ್ರತ್ಯಾರೋಪ ಇದೀಗ ಕರ್ನಾಟಕ ರಾಜಕಾರಣದಲ್ಲಿ ಹೊಸ ಕಿಡಿ ಹೊತ್ತಿಸಿದೆ. ಈ ಆರೋಪಗಳ ಹಿಂದೆ ನಿಜಕ್ಕೂ ಯಾರಿದ್ದಾರೆ ಎಂಬುದು ಮುಂದಿನ ದಿನಗಳಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.

Kishor KV

One thought on “ಮುಖ್ಯಮಂತ್ರಿಯಾದ ನಂತರ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು – ಸಿಎಂ ಡಿಕೆ ಶಿವಕುಮಾರ್”

Leave a Reply

Your email address will not be published. Required fields are marked *