ರಾಂಚಿಯಲ್ಲಿ ಇಂದು ಮಹಾಕದನ! – 2ನೇ T20 ಗೆಲ್ಲೋದ್ಯಾರು?

ಇಂದು ರಾಂಚಿಯಲ್ಲಿ ಅಕ್ಟೋಬರ್ 9ರಂದು ನಡೆಯಲಿರುವ ಎರಡನೇ ಟಿ20 ಪಂದ್ಯದ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮನೆಮಾಡಿದೆ. ರಾಂಚಿಯ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ತಂಡ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಪ್ರಯತ್ನಿಸಿದರೆ, ಹಿನ್ನಡೆಯಲ್ಲಿರುವ ತಂಡ ಪುಟಿದೇಳುವ ಲೆಕ್ಕಾಚಾರದಲ್ಲಿರಲಿದೆ. ಹೀಗಾಗಿ ಪಂದ್ಯದಲ್ಲಿ ಆರಂಭಿಕ ಆಟಗಾರರ ಪ್ರದರ್ಶನ, ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಹಾಗೂ ಡೆತ್ ಓವರ್ಗಳ ಬೌಲಿಂಗ್ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ.
ಇನ್ನು ಎಲ್ಲರ ಗಮನ ಸೆಳೆಯುತ್ತಿರುವ ಮತ್ತೊಂದು ವಿಚಾರವೆಂದರೆ ಸಂಜು ಸ್ಯಾಮ್ಸನ್ ಅವರ ಪ್ರದರ್ಶನ. ಮೊದಲ ಪಂದ್ಯದಲ್ಲಿ ನಿರೀಕ್ಷಿತ ಆಟವಾಡಲು ವಿಫಲರಾಗಿರುವ ಸಂಜು, ಎರಡನೇ ಪಂದ್ಯದಲ್ಲಿ ಅವಕಾಶ ಸಿಕ್ಕರೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಬೇಕಿದೆ. ಮತ್ತೊಂದೆಡೆ, ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರಲ್ಲಿ ಅವಕಾಶ ಸಿಗುತ್ತದೆಯೇ ಎಂಬ ಕುತೂಹಲವೂ ಹೆಚ್ಚಾಗಿದೆ.
ಇದನ್ನೂ ಓದಿ: DANGER ZONEನಲ್ಲಿ ಸಂಜು – ವಿಂಡೀಸ್ ಗೆ ಕಂ ಬ್ಯಾಕ್ ಟಾರ್ಗೆಟ್

ನೋಡಿರಿ

