ಕೋಟ್ಯಂತರ ಆಸ್ತಿಗಾಗಿ ತಂದೆಯನ್ನೇ ಕೊ*ದಳಾ ಮಗಳು? ಮಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ!

ಕೋಟಿ ಕೋಟಿ ರೂಪಾಯಿ ಮೌಲ್ಯದ ಆಸ್ತಿ… ಆ ಆಸ್ತಿಗಾಗಿ ಸ್ವಂತ ತಂದೆಯನ್ನೇ ಮಗಳು ಹತ್ಯೆ ಮಾಡಿದ್ದಾಳಾ? ಪ್ರಿಯಕರನ ಜೊತೆ ಸೇರಿ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾಳಾ? ಇಂತಹ ಹಲವು ಅನುಮಾನಗಳಿಗೆ ಕಾರಣವಾಗಿರುವ ಬೆಚ್ಚಿಬೀಳಿಸುವ ಘಟನೆಯೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಶವವನ್ನು ದಫನ ಮಾಡಿ ಬರೋಬ್ಬರಿ ಎರಡು ತಿಂಗಳು ಕಳೆದ ಬಳಿಕ ಪೊಲೀಸರು ಸಮಾಧಿಯಿಂದ ಮೃತದೇಹವನ್ನು ಹೊರತೆಗೆದು ತನಿಖೆ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಂದೆಯ ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿವೆ. ಮಗಳು ತನ್ನ ಬಾಯ್‌ಫ್ರೆಂಡ್ ಜೊತೆ ಸೇರಿ ತಂದೆಯನ್ನು ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮಂಜ ಬಾಯ್ಬಿಟ್ರೆ #*@$%@@#*!.. ಮಹಾಕವಿಗೆ RED CARD? ಕೊಳಕು ಮಾತು.. ಡೈರೆಕ್ಟ್ ಎಲಿಮಿನೇಟ್?
ಆರಂಭದಲ್ಲಿ ಮೃತದೇಹವನ್ನು ದಫನ ಮಾಡಲಾಗಿತ್ತು. ಆದರೆ, ಬಳಿಕ ಸಾವಿನ ಕುರಿತು ಅನುಮಾನಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ಸಮಾಧಿಯಿಂದ ಮೃತದೇಹವನ್ನು ಹೊರತೆಗೆದು ವೈಜ್ಞಾನಿಕ ಪರೀಕ್ಷೆಗೆ ಮುಂದಾಗಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ಅಂದರೆ ಎಫ್‌ಎಸ್‌ಎಲ್ ತಜ್ಞರು ಮೃತದೇಹದ ಮಾದರಿಗಳನ್ನು ಪರಿಶೀಲಿಸಲಿದ್ದು, ಸಾವಿನ ನಿಜವಾದ ಕಾರಣ ಪತ್ತೆಹಚ್ಚಲು ಈ ಪರೀಕ್ಷೆ ಮಹತ್ವದ್ದಾಗಿದೆ.
ಆದರೆ, ಈ ಪ್ರಕರಣದಲ್ಲಿ ಮಗಳು ಮತ್ತು ಆಕೆಯ ಪ್ರಿಯಕರನ ಪಾತ್ರವೇನು? ನಿಜಕ್ಕೂ ಆಸ್ತಿಗಾಗಿ ಕೊಲೆ ನಡೆದಿದೆಯೇ? ಅಥವಾ ಇದರ ಹಿಂದೆ ಬೇರೆ ಕಾರಣಗಳಿವೆಯೇ? ಎಂಬ ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.
ಸದ್ಯ ತನಿಖೆಯ ವರದಿ ಮತ್ತು ವೈಜ್ಞಾನಿಕ ಪರೀಕ್ಷೆಯ ಫಲಿತಾಂಶದ ಮೇಲೆ ಎಲ್ಲರ ಗಮನ ನೆಟ್ಟಿದೆ. ಪೊಲೀಸರ ತನಿಖೆಯಿಂದಲೇ ಸತ್ಯಾಂಶ ಹೊರಬರಬೇಕಿದೆ.

ನೋಡಿರಿ

