ಬಲವಂತವಾಗಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ – ಕೋಟೆನಾಡಿನಲ್ಲಿ ಇಬ್ಬರು ಮಂಗಳಮುಖಿಯರುಅರೆಸ್ಟ್

ಚಿತ್ರದುರ್ಗ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. 22 ವರ್ಷದ ಯುವಕನೊಬ್ಬನನ್ನು ಅಪಹರಿಸಿ, ಬಂಧನದಲ್ಲಿಟ್ಟು ಹಲ್ಲೆ ನಡೆಸಿ, ಬಲವಂತವಾಗಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆ ಸ್ಥಳೀಯವಾಗಿ ಆತಂಕ ಮೂಡಿಸಿದೆ.
ಮಾಹಿತಿಯ ಪ್ರಕಾರ, ಯುವಕನನ್ನು ಅಪಹರಿಸಿ ಬಂಧನದಲ್ಲಿಟ್ಟು ಹಲ್ಲೆ ನಡೆಸಿದ ಬಳಿಕ ಆತನ ಇಚ್ಛೆಗೆ ವಿರುದ್ಧವಾಗಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಇಬ್ಬರು ಟ್ರಾನ್ಸ್ಜೆಂಡರ್ ವ್ಯಕ್ತಿಗಳ ವಿರುದ್ಧ ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವೇದಿಕೆ ಮೇಲೆಯೇ ಕಲಾವಿದನಿಗೆ ಹೃದಯಾಘಾತ! – ನಾಟಕ ಮಾಡುತ್ತಲೇ ದುರಂತ ಅಂತ್ಯ!
ಚಿತ್ರದುರ್ಗದ ಬುದ್ಧನಗರದ ನಿವಾಸಿಗಳಾದ ಅನುಷ್ಕಾ ಹಾಗೂ ನಳಿನಾ ಬಂಧಿತ ಆರೋಪಿಗಳಾಗಿದ್ದು ಚಳ್ಳಕೆರೆ ಗೇಟ್ ಬಳಿ ಸುತ್ತಾಡುತ್ತಿದ್ದ ವೇಳೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರದುರ್ಗದಲ್ಲಿ ಹೂವು ವ್ಯಾಪಾರ ಮಾಡುತ್ತಿದ್ದ 25 ವರ್ಷದ ಯುವಕನಿಗೆ ಹೂವು ನೀಡುವ ಸಂದರ್ಭ ಇಬ್ಬರು ಮಂಗಳಮುಖಿಯರ ಪರಿಚಯವಾಗಿತ್ತು ಎನ್ನಲಾಗಿದೆ. ಬಳಿಕ ಯುವಕನ ಸಲಿಗೆಯನ್ನ ದುರುಪಯೋಗ ಪಡಿಸಿಕೊಂಡಿರುವ ಮಂಗಳಮುಖಿಯರು ಆತನಿಗೆ ಸೆಪ್ಟೆಂಬರ್ 1 ರಂದು ಶಸ್ತ್ರಚಿಕಿತ್ಸೆ ಮಾಡಿಸಿದ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲದೆ, ಯುವಕನ ತೊಡೆಗಳ ಮೇಲೆ ಬಿಸಿನೀರು ಹಾಗೂ ಕೆಂಡದಿಂದ ಸುಟ್ಟು ಹಿಂಸೆ ನೀಡಿದ ಆರೋಪವೂ ಕೇಳಿಬಂದಿದೆ. ಸದ್ಯ ಯುವಕ ತನ್ನ ಸ್ವಗ್ರಾಮದಲ್ಲಿ ನೆಲೆಸಿದ್ದಾನೆ.

ನೋಡಿರಿ

