ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ – ಮೊದಲ ದಿನ ಕಾಂಗರೂಗಳ ಹೆಡೆಮುರಿ ಕಟ್ಟಿದ ಟೀಮ್ ಇಂಡಿಯಾ
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡದ ಹೆಡೆಮುರಿ ಕಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ಗೆ ಇಳಿದ ಕಾಂಗಾರೂ ಪಡೆ ಕೇವಲ 177 ರನ್ಗಳಿಗೆ ಆಲ್ಔಟ್ ಆಗಿದೆ. ಗಾಯದಿಂದ ಚೇತರಿಸಿಕೊಂಡು ಸುದೀರ್ಘ ಸಮಯದ ಬಳಿಕ ವಾಪಸ್ ಆಗಿರುವ ಆಲ್ರೌಂಡರ್ ರವೀಂದ್ರ ಜಡೇಜಾ 5 ವಿಕೆಟ್ ಪಡೆದ್ರೆ, ಆರ್.ಅಶ್ವಿನ್ ಮೂರು ವಿಕೆಟ್ ಕಿತ್ತಿದ್ದಾರೆ. ಇನ್ನು ಭಾರತ ಒಂದು ವಿಕೆಟ್ನಷ್ಟಕ್ಕೆ 77 ರನ್ ಗಳಿಸಿದೆ. ರೋಹಿತ್ ಶರ್ಮಾ ಅಜೇಯ ಅರ್ಧಶತಕ ಬಾರಿಸಿದ್ದಾರೆ. ಆದ್ರೆ ಕೆಎಲ್ ರಾಹುಲ್ ಕೇವಲ 20ರನ್ಗೆ ಔಟಾಗಿ ನಿರಾಸೆ ಮೂಡಿಸಿದ್ದಾರೆ.
ಇದನ್ನೂ ಓದಿ: ಟೆಸ್ಟ್ ನಲ್ಲಿ ವೇಗವಾಗಿ 450 ವಿಕೆಟ್ – ಅನಿಲ್ ಕುಂಬ್ಳೆ ದಾಖಲೆ ಮುರಿದ ಅಶ್ವಿನ್
ಈ ನಡುವೆ ಸ್ಪಿನ್ನರ್ ಆರ್.ಅಶ್ವಿನ್, ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಂತ ವೇಗವಾಗಿ 450 ವಿಕೆಟ್ ಪಡೆದ ಎರಡನೇ ಬೌಲರ್ ಅನ್ನೋ ದಾಖಲೆಗೆ ಪಾತ್ರರಾಗಿದ್ದಾರೆ. 89ನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ 450 ವಿಕೆಟ್ ಪಡೆದಿದ್ದಾರೆ. ಇನ್ನು ಶ್ರೀಲಂಕಾದ ಮುತ್ತಯ್ಯ ಮುಳೀಧರನ್ ಕೇವಲ 80 ಟೆಸ್ಟ್ಗಳಲ್ಲೇ 450 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ.