ರಾಹುಲ್ ಗಾಂಧಿ ವಿಮಾನ ಲ್ಯಾಂಡಿಂಗ್​ ಗೆ ನಿರಾಕರಣೆ – ‘ರಾಗಾ’ ಬಗ್ಗೆ ಬಿಜೆಪಿಗೆ ಭಯ ಶುರುವಾಯ್ತಾ..!?

ರಾಹುಲ್ ಗಾಂಧಿ ವಿಮಾನ ಲ್ಯಾಂಡಿಂಗ್​ ಗೆ ನಿರಾಕರಣೆ – ‘ರಾಗಾ’ ಬಗ್ಗೆ ಬಿಜೆಪಿಗೆ ಭಯ ಶುರುವಾಯ್ತಾ..!?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಮಾನ ಲ್ಯಾಂಡಿಂಗ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸಮರ ಶುರುವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಯಾಣಿಸುತ್ತಿದ್ದ ವಿಮಾನವನ್ನ ಲ್ಯಾಂಡ್ ಮಾಡಲು ಗುಜರಾತ್​ನ ವಾರಾಣಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ವಿಮಾನ ನಿಲ್ದಾಣದ ಅಧಿಕಾರಿಗಳು ಅವಕಾಶ ನಿರಾಕರಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ : ಒತ್ತುವರಿ ತೆರವು ವೇಳೆ ತಾಯಿ, ಮಗಳು ಸಜೀವದಹನ – ಅಧಿಕಾರಿಗಳೇ ಗುಡಿಸಲಿಗೆ ಬೆಂಕಿ ಇಟ್ಟು ಕೊಂದ್ರಾ..!?

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಅಜಯ್ ರಾಯ್, ವಿಮಾನ ನಿಲ್ದಾಣದ ಅಧಿಕಾರಿಗಳು ಬಿಜೆಪಿ ಒತ್ತಡಕ್ಕೆ ಮಣಿದು ವಿಮಾನ ಲ್ಯಾಂಡಿಂಗ್ ಮಾಡಲು ಅವಕಾಶ ನೀಡಲಿಲ್ಲ. ಬದಲಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯನ್ನ ಸಬೂಬು ನೀಡಿ ಕ್ಷಮಿಸುವಂತೆ ಕೇಳಿದ್ದಾರೆ ಎಂದು ಆರೋಪಿಸಿದ್ದಾರೆ.

‘ವಾರಾಣಸಿ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ರಾಹುಲ್ ಗಾಂಧಿ ಅವರ ವಿಮಾನ ಇಳಿಯಬೇಕಿತ್ತು. ಆದರೆ ಉದ್ದೇಶಪೂರ್ವಕವಾಗಿ ಅನುಮತಿ ನೀಡಿಲ್ಲ. ರಾಹುಲ್ ಗಾಂಧಿ ಇಲ್ಲಿಗೆ ಆಗಮಿಸಿ ನಂತರ ಪ್ರಯಾಗ್‌ರಾಜ್‌ಗೆ ಹೋಗಬೇಕಿತ್ತು. ಆದರೆ ಸರ್ಕಾರದ ಒತ್ತಡದಿಂದಾಗಿ ವಿಮಾನ ನಿಲ್ದಾಣ ಪ್ರಾಧಿಕಾರ ಅವರ ವಿಮಾನವನ್ನು ಇಳಿಸಲು ಅವಕಾಶ ನೀಡಲಿಲ್ಲ. ಭಾರೀ ವಿಮಾನಗಳ ಸಂಚಾರ ಮತ್ತು ಸಂಚಾರ ದಟ್ಟಣೆ ಇದೆ ಎಂದು ಅವರು ಹೇಳಿ ಅನುಮತಿ ನೀಡಲಿಲ್ಲ’ ಎಂದು ರಾಯ್ ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ರಾಹುಲ್ ಗಾಂಧಿ ಬಗ್ಗೆ ಹೆದರಿಕೆ ಶುರುವಾಗಿದ್ದು, ಹೀಗಾಗಿಯೇ ವಾರಾಣಸಿಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಇಳಿಸಲು ಬಿಡಲಿಲ್ಲ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿದ್ದರಿಂದ ದೇಶದ ಪ್ರಧಾನಿ ಆತಂಕದಲ್ಲಿದ್ದರು. ಈಗ ರಾಹುಲ್‌ಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ವಾರಣಾಸಿಯ ಕೊತ್ವಾಲ್ ಬಾಬಾ ಕಾಲ ಭೈರವ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ರು. ನಂತರ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿಯವರು ಮೊದಲ ಬಾರಿಗೆ ಕಾಶಿಗೆ ಭೇಟಿ ನೀಡಿದ್ದು, ದಶಾಶ್ವಮೇಧ ಘಾಟ್‌ನಲ್ಲಿ ನಡೆದ ಭವ್ಯ ಗಂಗಾ ಆರತಿಯಲ್ಲಿ ಪಾಲ್ಗೊಂಡಿದ್ದರು.

suddiyaana