ರಿಷಬ್ ಶೆಟ್ಟಿಗೆ  ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿ

ರಿಷಬ್ ಶೆಟ್ಟಿಗೆ  ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿ

ಕಾಂತಾರ ಸಿನಿಮಾದ ಮೂಲಕ ಇಡೀ ಸಿನಿ ಜಗತ್ತೇ ಸ್ಯಾಂಡಲ್ ವುಡ್ ನತ್ತ  ತಿರುಗಿ ನೋಡುವಂತೆ ಮಾಡಿದ ಡಿವೈನ್‌ ಸ್ಟಾರ್‌ ರಿಷಬ್ ಶೆಟ್ಟಿಗೆ ಮತ್ತೊಂದು ಪ್ರಶಸ್ತಿಯ ಗರಿ ಮುಡಿಗೇರಿದೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ  ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:‘ಜೈಲರ್’ ಶೂಟಿಂಗ್‌ನಲ್ಲಿ ರಜನಿಗೆ ಶಿವಣ್ಣ ಸಾಥ್- ಸಿನಿ ದಿಗ್ಗಜರನ್ನು ಒಟ್ಟಿಗೆ ನೋಡಿ ಖುಷಿಯಾದ ಫ್ಯಾನ್ಸ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಮೂಲಕ ಬಾಕ್ಸಾಫೀಸ್ ನಲ್ಲಿ ದಾಖಲೆ ನಿರ್ಮಿಸಿದೆ. ಇದೀಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ ತಮ್ಮದಾಗಿಸಿಕೊಂಡಿದ್ದಾರೆ.

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ ಶೆಟ್ಟಿಗೆ ಈ ಪ್ರಶಸ್ತಿ ಘೋಷಿಸಲಾಗಿದೆ. ಇದೇ ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು,  ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ ಅಂತಾ ಮೂಲಗಳು ತಿಳಿಸಿವೆ.

ಕೇವಲ 16 ಕೋಟಿ ವೆಚ್ಚದಲ್ಲಿ ತಯಾರಾದ ಕಾಂತಾರ 400 ಕೋಟಿಗೂ ಅಧಿಕ ಗಳಿಕೆ ಮಾಡಿದೆ. ಇದೀಗ ಈ ಚಿತ್ರ ಕನ್ನಡ, ತುಳು, ತೆಲುಗು, ಸೇರಿ 6 ಭಾಷೆಯಲ್ಲಿ ತೆರೆಕಂಡಿದೆ. ಸದ್ಯದಲ್ಲೇ ಇಂಗ್ಲಿಷ್ ನಲ್ಲೂ ಚಿತ್ರ ತೆರೆಕಾಣಲಿದೆ. ಇನ್ನು ಕಾಂತಾರ 2ನೇ ಭಾಗವೂ ಸಿದ್ಧವಾಗುತ್ತಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ದಾದಾ ಸಾಹೇಬ್ ಫಾಲ್ಕೆ ಅಕಾಡೆಮಿ ಅವಾರ್ಡ್

ಇನ್ನು ಇದೇ ರೀತಿ 2019ರಲ್ಲಿ ದಾದಾ ಸಾಹೇಬ್ ಸೌತ್ ಫೌಂಡೇಷನ್ ಅವಾರ್ಡ್ ಎಂಬ ಕಾರ್ಯಕ್ರಮವನ್ನು ನಡೆಸಿದ್ದಾಗ ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಾಪ್ಟರ್ 1 ಚಿತ್ರಕ್ಕಾಗಿ ಪ್ರಶಸ್ತಿಯನ್ನು ಪಡೆದಿದ್ದರು. ಬಳಿಕ ಸೈಮಾ, ಫಿಲ್ಮ್‌ಫೇರ್ ಅವಾರ್ಡ್ಸ್ ರೀತಿ ದಾದಾ ಸಾಹೇಬ್ ಪ್ರಶಸ್ತಿಯನ್ನು ದಕ್ಷಿಣ ಭಾರತದ ಎಲ್ಲಾ ಇಂಡಸ್ಟ್ರಿಗಳಿಗೂ ಪ್ರತ್ಯೇಕವಾಗಿ ನೀಡಿದ್ದಾಗ ನಟ ಶಿವ ರಾಜ್‌ಕುಮಾರ್, ರಕ್ಷಿತ್ ಶೆಟ್ಟಿ ಸಹ ಉತ್ತಮ ನಟರು ಎಂಬ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

ಇನ್ನು ಕನ್ನಡ ಚಲನಚಿತ್ರರಂಗದ ವರನಟ ಡಾ ರಾಜ್‌ಕುಮಾರ್ ಅವರಿಗೆ ನೀಡಲಾಗಿದ್ದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೂ ಚಿತ್ರರಂಗದ ಕಲಾವಿದರ ಶ್ರಮವನ್ನು ಗುರುತಿಸಿ ಹುರಿದುಂಬಿಸಲು ನೀಡುವ ಈ ಪ್ರಶಸ್ತಿಗಳಿಗೂ ಬೃಹತ್ ವ್ಯತ್ಯಾಸವಿದೆ. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಮಹಾ ಸಾಧನೆ ಮಾಡಿದ ಸಾಧಕರಿಗೆ ವರ್ಷಕ್ಕೊಮ್ಮೆ ನೀಡಿದರೆ, ಈ ದಾದಾ ಸಾಹೇಬ್ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ ಅನ್ನು ಅಕಾಡೆಮಿ ಆಯಾ ವರ್ಷ ತಮ್ಮ ಉತ್ತಮ ಚಿತ್ರಗಳ ಮೂಲಕ ಮಿಂಚಿದ ಕಲಾವಿದರಿಗೆ ನೀಡಲಾಗುತ್ತದೆ.

ಕನ್ನಡಿಗರು ಮೇಲೆ ಹೇಳಿದಂತೆ ತಮ್ಮ ಸಾಧನೆಯನ್ನು ಗುರುತಿಸಿ ಪ್ರತಿ ವರ್ಷ ಒಬ್ಬೊಬ್ಬ ಕಲಾವಿದನಿಗೆ ನೀಡಲಾಗುವ ಪ್ರತಿಷ್ಠಿತ ದಾದಾ ಸಾಹೇಬ್ ಪ್ರಶಸ್ತಿಯನ್ನು ಇಲ್ಲಿಯವರೆಗೂ ಇಬ್ಬರು ಸಾಧಕರು ಪಡೆದುಕೊಂಡಿದ್ದಾರೆ. 1995ರಲ್ಲಿ ಡಾ ರಾಜ್‌ಕುಮಾರ್ ಈ ಪ್ರಶಸ್ತಿಯನ್ನು ಪಡೆದುಕೊಂಡರೆ, 2008ರಲ್ಲಿ ಕರ್ನಾಟಕ ಮೂಲದ ಛಾಯಾಗ್ರಾಹಕ ವಿ ಕೆ ಮೂರ್ತಿ ಹಿಂದಿ ಚಿತ್ರರಂಗದಲ್ಲಿನ ತಮ್ಮ ಸಾಧನೆಗಾಗಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

suddiyaana