‘ಕಾಂಗ್ರೆಸ್‌ನಲ್ಲಿ 10 ಮಂದಿಗೆ ಸಿಎಂ ಆಗುವ ಆಸೆ, ಅದರಲ್ಲಿ ನಾನೂ ಒಬ್ಬ..!’- ಡಾ. ಜಿ ಪರಮೇಶ್ವರ್
ಕಾಂಗ್ರೆಸ್‌ನಲ್ಲಿ ಹತ್ತು ಜನ ಸಿಎಂ ಆಗುವ ಆಸೆ ಇಟ್ಟುಕೊಂಡಿದ್ದಾರೆ. ಅದರಲ್ಲಿ ನಾನೂ ಒಬ್ಬ ಅಂತಾ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿಕೊಂಡಿದ್ದಾರೆ. ಈ ಮೂಲಕ ಪರಮೇಶ್ವರ್ ಮತ್ತೊಮ್ಮೆ ಸಿಎಂ ಆಗುವ ಕನಸಿನಲ್ಲಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಪರಮೇಶ್ವರ್ ಅವರು, ನನಗೂ ಸಿಎಂ ಆಗುವ ಆಸೆ ಇದೆ. ಅದಕ್ಕೂ ಮೊದಲು ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕಿದೆ. ಆ ಮೇಲೆ ಹೈಕಮಾಂಡ್ ಯಾರು ಮುಖ್ಯಮಂತ್ರಿ ಆಗಬೇಕು ಅನ್ನೋದನ್ನು ನಿರ್ಧಾರ ಮಾಡುತ್ತದೆ ಎಂದರು.
ಇದನ್ನೂ ಓದಿ: ಇದೇನಾ ‘ನಿಮ್ಮ ಸ್ವಚ್ಛಭಾರತ್’ ? – ಹಳ್ಳಿಗಳ ಪರಿಸ್ಥಿತಿ ಕಂಡು ಬಿಜೆಪಿ ವಿರುದ್ಧ ಕುಮಾರಸ್ವಾಮಿ ಫುಲ್ ಗರಂ
ರಾಜ್ಯದ ಜನರು ಕಾಂಗ್ರೆಸ್ ಕಡೆಗೆ ಒಲವು ತೋರುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಸ್ಕ್ರೀನಿಂಗ್ ಕಮಿಟಿಯಲ್ಲಿ ನಾನು ಸಹ ಸದಸ್ಯನಾಗಿದ್ದೇನೆ. ಈ ತಿಂಗಳೊಳಗೆ ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಸಲ್ಲದ ಭರವಸೆ ನೀಡುತ್ತಿದ್ದಾರೆ. ಬಜೆಟ್ ಸಂದರ್ಭದಲ್ಲಿ ಯಾವುದೇ ಘೋಷಣೆ ಮಾಡುವಂತಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಲಿದೆ ಎಂದರು.