ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ ‘She Toilet’ ನಿರ್ಮಾಣ
ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್‌ ಪಾಸ್

ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ ‘She Toilet’ ನಿರ್ಮಾಣಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್‌ ಪಾಸ್

ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ She Toilet ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬೆಂಗಳೂರು ಮಹಾನಗರದ ಮಾರುಕಟ್ಟೆಗಳು, ಬೃಹತ್ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ‘She Toilet’ ಗಳನ್ನು ನಿರ್ಮಿಸಲಾಗುವುದು. ಈ ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು SOS ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು.

ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೆ ಘೋಷಣೆ. ಗೃಹಿಣಿಯರಿಗೆ ತಿಂಗಳಿಗೆ 500 ರೂಗಳ ಸಹಾಯಧನ. ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್‌ ಪಾಸ್‌. 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್‌ ಪಾಸ್ ನೀಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

suddiyaana