ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ನಿಧನ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ನಿಧನ

ಬೆಂಗಳೂರು: ರಾಜ್ಯದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ.

ಇದನ್ನೂ ಓದಿ: ಯಕ್ಷಲೋಕದಿಂದ ಮರೆಯಾದ ಬಲಿಪ ನಾರಾಯಣ ಭಾಗವತ – ಕಂಚಿನ ಕಂಠದ ಯಕ್ಷ ದಿಗ್ಗಜ ಇನ್ನು ನೆನಪು ಮಾತ್ರ

ಕಳೆದ 2 ತಿಂಗಳಿನಿಂದ ವಿಜಯಮ್ಮ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಎರಡು ದಿನಗಳ ಹಿಂದೆ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ, ಒಬ್ಬ ಮಗಳು, ಒಬ್ಬ ಮಗ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ರಮೇಶ್ ಕುಮಾರ್ ಪತ್ನಿ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ‘ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

suddiyaana