ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಪ್ರತಿಭಟನೆ – ಮಂಡ್ಯ ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್!

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಪ್ರತಿಭಟನೆ – ಮಂಡ್ಯ ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್!

ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಬೀಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಂಡರ್ ಪಾಸ್‌ ನಿರ್ಮಾಣ ಮಾಡದಿದ್ದನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಇದನ್ನೂ ಓದಿ : ಚಿರತೆ, ಹುಲಿ ದಾಳಿ ಬಳಿಕ ಕಾಡಾನೆ ಅಟ್ಟಹಾಸ – ಕಡಬದಲ್ಲಿ ಇಬ್ಬರನ್ನ ಕೊಂದು ಹಾಕಿದ ಮದಗಜ

ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮಸ್ಥರು ಅಂಡರ್ ಪಾಸ್‍ನ್ನು ತಮ್ಮೂರ ಬಳಿಯೇ ನಿರ್ಮಿಸಬೇಕೆಂದು ಈ ಹಿಂದೆ ಸಹ ಪ್ರತಿಭಟನೆ ಮಾಡಿದ್ದರು. ಆದರೆ ಗ್ರಾಮದ ಹೊರಗೆ ಅಂಡರ್ ಪಾಸ್ ನಿರ್ಮಾಣವಾಗಿತ್ತು. ಇದರ ವಿರುದ್ಧ ತಿರುಗಿಬಿದ್ದ ಊರಿನ ಗ್ರಾಮಸ್ಥರು ಇಂದು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ರು. ಅಂಡರ್ ಪಾಸ್ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರದಿಂದ ಅನುಮತಿ ಕೊಡಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು.

ಗ್ರಾಮಸ್ಥರು ರಸ್ತೆಗಳಿಗೆ ಎತ್ತಿನಗಾಡಿಗಳನ್ನು ನುಗ್ಗಿಸಿ, ಬೈಕ್, ಕಾರು, ಆಟೋಗಳನ್ನು ನಿಲ್ಲಿಸಿ ರಸ್ತೆ ವಾಹನಗಳನ್ನು ತಡೆದಿದ್ದರು. ಪ್ರತಿಭಟನೆಗೆ ರೈತ ಸಂಘ ಸಹ ಬೆಂಬಲ ಕೊಟ್ಟಿದ್ದು ಪ್ರತಿಭಟನೆ ಕಾವು ಹೆಚ್ಚಾಗಿತ್ತು. ಪ್ರತಿಭಟನೆಯಿಂದ ಕಿಲೋ ಮೀಟರ್‍ಗಟ್ಟಲೇ ಎರಡು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ತಳ್ಳಾಟ ನಡೆಯಿತು. ಈ ವೇಳೆ ಗ್ರಾಮಸ್ಥರು ಸರ್ಕಾರ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ಹೆದ್ದಾರಿ ತೆರವುಗೊಳಿಸುವಂತೆ ಪೊಲೀಸರು ಗ್ರಾಮಸ್ಥರ ಬಳಿ ಮನವಿ ಮಾಡಿದ್ರು. ಆದ್ರೆ ಇದಕ್ಕೆ ಗ್ರಾಮಸ್ಥರು ಹಾಕಲಿಲ್ಲ. ಹೀಗಾಗಿ ಪೊಲೀಸರು ಲಾಠಿ ಬೀಸಿ ಗ್ರಾಮಸ್ಥರನ್ನು ಚದುರಿಸಿ ರಸ್ತೆಗೆ ಅಡ್ಡಲಾಗಿರಿಸಿದ್ದ ವಾಹನಗಳು ಹಾಗೂ ಶಾಮಿಯಾನವನ್ನು ತೆರುವುಗೊಳಿಸಿದ್ರು. ಗ್ರಾಮಸ್ಥರ ಬೇಡಿಕೆಯನ್ನು ಅಧಿಕಾರಿಗಳ ಗಮನಕ್ಕೆ ತರುವ ಭರವಸೆಯನ್ನು ಎಸ್​ಪಿ ಎನ್.ಯತೀಶ್ ನೀಡಿದ್ದಾರೆ. ಪರಿಸ್ಥಿತಿಯನ್ನು ತಿಳಿಗೊಳಿಸಲು ರೈತ (Farmers) ಮುಖಂಡ ಮಧುಚಂದನ್ ಅವರನ್ನು ಬಲವಂತವಾಗಿ ಪೊಲೀಸರು ವಶಕ್ಕೆ ಪಡೆದ್ರು. ಇದ್ರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು.

suddiyaana