ಶೇ.17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರದಿಂದ ಅಧಿಕೃತ ಆದೇಶ – ಯಾವಾಗ್ಲಿಂದ ಜಾರಿಯಾಗುತ್ತೆ ಗೊತ್ತಾ..?

ಶೇ.17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರದಿಂದ ಅಧಿಕೃತ ಆದೇಶ – ಯಾವಾಗ್ಲಿಂದ ಜಾರಿಯಾಗುತ್ತೆ ಗೊತ್ತಾ..?

ಸರ್ಕಾರಿ ನೌಕರರಿಗೆ ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ರು. ಇದೀಗ ಭರವಸೆಯ ಬಗ್ಗೆ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಏಪ್ರಿಲ್ 1ರಿಂದಲೇ ಈ ಆದೇಶ ಜಾರಿಗೆ ಬರಲಿದೆ. ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳ ಮಾಡಲು ಇವತ್ತು ನಿರ್ಧಾರ ಕೈಗೊಳ್ಳಲಾಗಿತ್ತು.

ಸರ್ಕಾರಿ ನೌಕರರಿಗೆ ಶೇಕಡಾ 17ರಷ್ಟು ವೇತನ ಹೆಚ್ಚಳ ಮಾಡೋದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು ಕೂಡಲೇ ಮುಷ್ಕರ ಕೈ ಬಿಡುವಂತೆ ನೌಕರರಿಗೆ ಮನವಿ ಮಾಡಿದ್ದರು. ಆದ್ರೆ ಮುಖ್ಯಮಂತ್ರಿ ಬೊಮ್ಮಾಯಿಯವರ ಘೋಷಣೆಗೆ ಸಕಾರಿ ನೌಕರರು ಒಪ್ಪಿಗೆ ನೀಡಿರಲಿಲ್ಲ. ಘೋಷಣೆ ಬಗ್ಗೆ ಅಧಿಕೃತವಾಗಿ ಆದೇಶ ಹೊರಡಿಸುವವರೆಗೂ ನಾವು ಮುಷ್ಕರ ಕೈಬಿಡಲ್ಲ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದರು. ಈ ಎಲ್ಲಾ ಕಾರಣಗಳಿಂದಲಾಗಿ ಸರ್ಕಾರ ತನ್ನ ಭರವಸೆಯ ಅಧಿಕೃತವಾಗಿ ಆದೇಶ ಹೊರಡಿಸಿದೆ. ಆದ್ರೆ ಆದೇಶ ಹೊರಬಿದ್ದರೂ ನೌಕರರು ಪ್ರತಿಭಟನೆ ಇನ್ನೂ ಹಿಂಪಡೆದಿಲ್ಲ. ವಿವಿಧ ಸಂಘಟನೆಗಳ ಮುಖಂಡರ ಜೊತೆ ಚರ್ಚೆ ನಡೆಸಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳೋದಾಗಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ.

 

 

suddiyaana