ಮಕ್ಕಳಿಗೆ ಜನ್ಮ ನೀಡಿದ್ರೆ ಲಕ್ಷ ಲಕ್ಷ ಹಣ! – ಹೆತ್ತವರಿಗೆ ಸರ್ಕಾರದಿಂದ ಬಂಪರ್ ಆಫರ್

ಮಕ್ಕಳಿಗೆ ಜನ್ಮ ನೀಡಿದ್ರೆ ಲಕ್ಷ ಲಕ್ಷ ಹಣ! – ಹೆತ್ತವರಿಗೆ ಸರ್ಕಾರದಿಂದ ಬಂಪರ್ ಆಫರ್

ಜಪಾನ್ ನಲ್ಲಿ ಜನನ ಪ್ರಮಾಣ ಕುಸಿಯುತ್ತಿದೆ. ಇದು ಹೀಗೆ ಮುಂದುವರಿದರೆ ಜಪಾನ್ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಬಹುದು ಅಂತಾ ತಜ್ಞರು  ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅಲ್ಲಿನ ಸರ್ಕಾರ ಜನನ ಪ್ರಮಾಣವನ್ನು ಹೆಚ್ಚಿಸಲು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಮಕ್ಕಳಿಗೆ ಜನ್ಮ ನೀಡಿದ್ರೆ ಈಗಾಗಲೇ ನೀಡುತ್ತಿರುವ ಹಣದ ಜೊತೆಗೆ 48 ಸಾವಿರ ರೂಪಾಯಿ ಹೆಚ್ಚು ನೀಡುವುದಾಗಿ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಮಾರ್ಚ್‌ ನಲ್ಲಿ H3N2 ಸೋಂಕು ಕಡಿಮೆಯಾಗುತ್ತಾ? – ಆರೋಗ್ಯ ಸಚಿವಾಲಯ ಹೇಳಿದ್ದೇನು?

ಜಪಾನ್ ಸರ್ಕಾರ ಪ್ರಸ್ತುತ, ಮಗುವಿನ ಜನನದ ನಂತರ ಪೋಷಕರಿಗೆ ಹೆರಿಗೆ ಮತ್ತು ಶಿಶುಪಾಲನೆಗಾಗಿ ಒಟ್ಟು 2,52,338 ರೂ. ಅನುದಾನವನ್ನು ನೀಡುತ್ತಿದೆ. ಇದೀಗ ಆರೋಗ್ಯ, ಕಾರ್ಮಿಕ ಮತ್ತು ಕಲ್ಯಾಣ ಸಚಿವ ಕ್ಯಾಟೊ ಕಟ್ಸುನೋಬು ಮಗು ಜನನದ ನಂತರ ನೀಡಲಾಗುವ ಹಣವನ್ನು ಹೆಚ್ಚಿಸಲು ನಿರ್ಧರಿಸಿದ್ದು, ಆ ಸಂಖ್ಯೆಯನ್ನು 3,00,402 ರೂ. ಹೆಚ್ಚಿಸುವುದಾಗಿ ತಿಳಿಸಿದ್ದಾರೆ. ಈಗಾಗಲೇ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಸಚಿವರು ಯೋಜನೆಯ ಕುರಿತು ಚರ್ಚಿಸಿದ್ದಾರೆ. ಸರ್ಕಾರ 2023ರ ಆರ್ಥಿಕ ವರ್ಷಕ್ಕೆ ಈ ಯೋಜನೆಯನ್ನು ಅಂಗೀಕರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಜಪಾನ್‍ನಲ್ಲಿ ಸಾರ್ವಜನಿಕ ವೈದ್ಯಕೀಯ ವಿಮಾ ವ್ಯವಸ್ಥೆಯಿದೆ. ಇದರಿಂದಾಗಿ ಸರ್ಕಾರವು ನೀಡುವ ಅನುದಾನವನ್ನು ಹೆಚ್ಚಿಸಿದರೆ ಆಸ್ಪತ್ರೆಯಿಂದ ಮನೆಗೆ ಬರುವಾಗ ಪೋಷಕರಿಗೆ ಹೆಚ್ಚಿನ ಪ್ರಮಾಣದ ದುಡ್ಡು ಉಳಿಯುತ್ತದೆ. 2021ರಲ್ಲಿ ಬಿಡುಗಡೆಯಾದ ಸರ್ಕಾರಿ ಅಂಕಿ ಅಂಶಗಳ ಪ್ರಕಾರ, ಜಪಾನ್‍ನಲ್ಲಿ ಜನನದ ದರಕ್ಕಿಂತ ಸಾವಿನ ದರವೇ ಹೆಚ್ಚಿದೆ. ದೇಶದಲ್ಲಿ ಕಳೆದ ವರ್ಷ 8,11,604 ಜನನವಾಗಿದ್ದರೆ, 14,39,809 ಸಾವು ದಾಖಲಾಗಿದೆ ಎಂದು ತಿಳಿದುಬಂದಿದೆ.

suddiyaana