ವೀರಪ್ಪನ್ ಮಗಳು ಸಿನಿಮಾ ಹೀರೋಯಿನ್ – ‘ಮಾವೀರನ್ ಪಿಳ್ಳೈ’ ಚಿತ್ರಕ್ಕೆ ಬಣ್ಣ ಹಚ್ಚಿದ ವಿಜಯಲಕ್ಷ್ಮೀ
ವೀರಪ್ಪನ್ ಮಗಳು ವಿಜಯಲಕ್ಷ್ಮೀ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ವೀರಪ್ಪನ್ ಮಗಳು ವಿಜಯಲಕ್ಷ್ಮೀಗೆ ಚಿಕ್ಕಂದಿನಿಂದಲೂ ಬಣ್ಣ ಹಚ್ಚಬೇಕು ಎಂಬ ಆಸೆ ಇತ್ತು. ‘ಮಾವೀರನ್ ಪಿಳ್ಳೈ’ ಸಿನಿಮಾ ಮೂಲಕ ವಿಜಯಲಕ್ಷ್ಮೀ ಆಸೆ ಈಡೇರುತ್ತಿದೆ. ‘ಮಾವೀರನ್ ಪಿಳ್ಳೈ’ (Maaveeran Pillai ) ಹೆಸರಿನ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಶೀಘ್ರದಲ್ಲೇ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಲಿದೆ.
ಇದನ್ನೂ ಓದಿ: 5 ಕಥೆ, 5 ನಿರ್ದೇಶಕರ ವಿಭಿನ್ನ ಸಿನಿಮಾ – ‘ಪೆಂಟಗನ್’ ರಿಲೀಸ್ ಡೇಟ್ ಘೋಷಣೆ
ಈ ಸಿನಿಮಾದಿಂದ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ಇದೆ. ಈ ಕಾರಣಕ್ಕೆ ವಿಜಯಲಕ್ಷ್ಮೀ ಸಿನಿಮಾ ಒಪ್ಪಿಕೊಂಡಿದ್ದಾರೆ. ಚೆನ್ನೈನಲ್ಲಿ ಇತ್ತೀಚೆಗೆ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆದಿದೆ. ವೀರಪ್ಪನ್ ಪತ್ನಿ ಮುತ್ತುಲಕ್ಷ್ಮೀ, ಆಲ್ ಪೀಪಲ್ಸ್ ಪೊಲಿಟಿಕಲ್ ಪಾರ್ಟಿ ಅಧ್ಯಕ್ಷೆ ರಾಜೇಶ್ವರಿ ಪ್ರಿಯಾ, ನಟ ಕೂಲ್ ಸುರೇಶ್, ನಿರ್ದೇಶಕ ಪೇರರಸು, ನಿರ್ಮಾಪಕ ಕೆ.ಎನ್.ಆರ್. ರಾಜ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕುಡಿತದಿಂದಾಗಿ ಪ್ರತೀ ಮನೆಯಲ್ಲೂ ಸಾಕಷ್ಟು ಮಹಿಳೆಯರು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಆ ಕುರಿತು ಸಿನಿಮಾದ ಕಥೆ ಇದೆ. ಅದೇ ಕಾರಣಕ್ಕೆ ಈ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ’ ಎಂದು ವಿಜಯಲಕ್ಷ್ಮೀ ಹೇಳಿದ್ದಾರೆ. ನಿರ್ಮಾಪಕ ರಾಜ ಮಾತನಾಡಿ, ‘ಪ್ರತಿ ಸಂಸಾರದಲ್ಲೂ ಕುಡಿತದಿಂದ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತವೆ. ಕುಡಿತದಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದೇವೆ’ ಎಂದಿದ್ದಾರೆ.