ನಿರೀಕ್ಷಣಾ ಜಾಮೀನು ಅರ್ಜಿ ವಜಾ- ಬಂಧನದ ಭೀತಿಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ನಿರೀಕ್ಷಣಾ ಜಾಮೀನು ಅರ್ಜಿ ವಜಾ- ಬಂಧನದ ಭೀತಿಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠ ವಜಾಗೊಳಿಸಿ ಸೋಮವಾರ ಆದೇಶ ನೀಡಿದೆ. ಹೀಗಾಗಿ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಿಸುತ್ತಿದ್ದಾರೆ.

ಇದನ್ನೂ ಓದಿ:  ಬೇಲ್ ಸಿಗ್ತಿದ್ದಂತೆ ಬಿಲದಿಂದ ಹೊರಬಂದ ಬಿಜೆಪಿ ಶಾಸಕ – ಬೆಂಬಲಿಗರೊಂದಿಗೆ ಮಾಡಾಳ್ ಮೆರವಣಿಗೆ..!

ಶಾಸಕ ಮಾಡಾಳು ವಿರುಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ರೂಪಾಯಿ ಹಣವನ್ನು ಪಡೆಯುವ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದರು. ಇನ್ನು ಕಚೇರಿ ಹಾಗೂ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಬರೋಬ್ಬರಿ 6 ಕೋಟಿ ರೂ. ಹಣ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಒಟ್ಟು 6 ಜನ ಆರೋಪಿಗಳನ್ನಾಗಿ ಚಾರ್ಜ್‌ ಶೀಟ್‌ ಸಿದ್ಧಪಡಿಸಿದ್ದರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಅಧ್ಯಕ್ಷರಾಗಿದ್ದ ಮಾಡಾಳು ವಿರುಪಾಕ್ಷಪ್ಪ ಖಾಸಗಿ ಕಂಪನಿಯೊಂದರ ಪ್ರಕರಣವನ್ನು ಖುಲಾಸೆ ಮಾಡುವ ಕಾರಣಕ್ಕೆ 40 ಲಕ್ಷ ರೂ. ಲಂಚ ಪಡೆಯುತ್ತಿದ್ದರು ಎಂದು ಆರೋಪಿಸಿ ಅವರನ್ನೇ ಎ1 ಆರೋಪಿಯನ್ನಾಗಿ ಮಾಡಲಾಗಿತ್ತು. ಉಳಿದಂತೆ ಅವರ ಪುತ್ರ ಮಾಡಾಳು ಪ್ರಶಾಂತ್, ಹಣ ಕೊಡಲು ಬಂದಿದ್ದ ಕಂಪನಿಯ ಇಬ್ಬರು ವ್ಯಕ್ತಿಗಳು ಹಾಗೂ ಮಾಡಾಳು ವಿರುಪಾಕ್ಷಪ್ಪ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಮಾಡಾಳು ವಿರುಪಾಕ್ಷಪ್ಪ ಮಾತ್ರ 6 ದಿನಗಳ ಕಾಲ ಯಾರ ಕೈಗೂ ಸಿಗದಂತೆ ತಪ್ಪಿಸಿಕೊಂಡಿದ್ದರು. ನಂತರ ಹೈಕೋರ್ಟ್‌ನಲ್ಲಿ ಜಾಮೀನು ಸಿಕ್ಕ ತಕ್ಷಣವೇ ಬಹಿರಂಗವಾಗಿ ಪ್ರತ್ಯಕ್ಷ ಆಗಿದ್ದರು.

ಈ ಮಧ್ಯೆ, ಲೋಕಾಯುಕ್ತ ಪ್ರಕರಣದಲ್ಲಿ ಜಾಮೀನಿನಲ್ಲಿದ್ದರೂ ಅವರು, 351 ಕೋಟಿ ವೆಚ್ಚದ ವಿವಿಧ ಕಾಮಗಾರಿ ಹಾಗೂ ಶಂಕುಸ್ಥಾಪನಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.

suddiyaana