ಚುನಾವಣಾ ದಿನಾಂಕ ಘೋಷಣೆ ಬಳಿಕ ನೀತಿ ಸಂಹಿತೆ ಜಾರಿ – ಸಿಎಂ ಸರ್ಕಾರಿ ಕಾರ್ಯಕ್ರಮಗಳು ರದ್ದು

ಚುನಾವಣಾ ದಿನಾಂಕ ಘೋಷಣೆ ಬಳಿಕ ನೀತಿ ಸಂಹಿತೆ ಜಾರಿ – ಸಿಎಂ ಸರ್ಕಾರಿ ಕಾರ್ಯಕ್ರಮಗಳು ರದ್ದು

ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಗೆ ಕೌಂಟ್ ಡೌನ್ ಶುರುವಾಗಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಎಲೆಕ್ಷನ್ ಡೇಟ್ ಅನೌನ್ಸ್ ಮಾಡಲಾಗುತ್ತದೆ. ದಿನಾಂಕ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ(Code Of conduct) ಕೂಡ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳನ್ನ ರದ್ದು ಮಾಡಲಾಗಿದೆ.

ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೂ ರದ್ದು ಮಾಡಿದ್ದಾರೆ.

 ಬುಧವಾರ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟ ಆಗಲಿದೆ. ಚುನಾವಣಾ ಆಯೋಗ ಇಂದು ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದೆ. ನೀತಿ ಸಂಹಿತೆ ಸಹ ಇಂದಿನಿಂದಲೇ ಜಾರಿಯಾಗಲಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಹೀಗಾಗಿ ಬೊಮ್ಮಾಯಿ ತಮ್ಮ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. 2018 ರ ವಿಧಾನಸಭಾ ಚುನಾವಣೆಯು ಮೇ 12, 2018 ರಂದು ನಡೆದಿತ್ತು. ಮತ್ತು ಪ್ರಸ್ತುತ ವಿಧಾನಸಭೆಯ ಅವಧಿಯು ಮೇ 24, 2023 ರಂದು ಮುಕ್ತಾಯಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ. ವೇಳಾಪಟ್ಟಿ ಪ್ರಕಟವಾದ ನಂತರ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಇಂದಿನಿಂದಲೇ ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದರೆ ಸಿಎಂ ಸೇರಿದಂತೆ ಸಚಿವರು ಸರ್ಕಾರಿ ಸೌಲಭ್ಯವನ್ನು ಬಳಸುವಂತಿಲ್ಲ. ಹಾಗೂ ಸರ್ಕಾರ ಯಾವುದೇ ಹೊಸ ಯೋಜನೆ ಘೋಷಣೆ ಮಾಡುವಂತಿಲ್ಲ. ಆದ್ರೆ ಸಿಎಂ ಸೇರಿ ಸಚಿವರು, ಶಾಸಕರಿಗೆ ಎಂದಿನಂತೆ ಭದ್ರತೆ ಇರುತ್ತೆ. ಎಸ್ಕಾರ್ಟ್​​​ ಸೇರಿದಂತೆ ಎಲ್ಲಾ ರೀತಿಯ ಭದ್ರತೆ ಮುಂದುವರಿಯಲಿದೆ.

suddiyaana