ಮನೆಯಿಂದಲೇ ಮತದಾನ ಮಾಡಲು ಅವಕಾಶ – ಯಾರಿಗೆ ಮತ್ತು ಹೇಗೆ?
ಕರ್ನಾಟಕದಲ್ಲಿ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡಲು ಕೇಂದ್ರು ಚುನಾವಣಾ ಆಯೋಗ ಅವಕಾಶ ನೀಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ.
ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ
ಕರ್ನಾಟಕದಲ್ಲಿ ಒಟ್ಟು 5.21 ಕೋಟಿ ಮತದಾರರು ಇದ್ದು, ಇದರಲ್ಲಿ 80 ವರ್ಷ ಮೇಲ್ಪಟ್ಟವರು ಮತದಾರರು 12,15,763 ಇದ್ದು, 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. ಇನ್ನು ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ. ಇವರೆಲ್ಲರಿಗೂ ಮನೆಯಿಂದ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಸಮಸ್ಯೆ ಇದ್ದವರು, ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ತಿಳಿಸಿದರು.
ಮನೆಯಿಂದಲೇ ಮತದಾನ ಮಾಡಲು ಅವಕಾಶ
ಚುನಾವಣೆ ಆಯೋಗದ ವೆಬ್ಸೈಟ್ ವೋಟರ್ ಹೆಲ್ಪ್ಲೈನ್ ಅಥವಾ ಸಕ್ಷಮ್ ಆ್ಯಪ್ನಲ್ಲಿ ನೋಂದಣಿ ಕಡ್ಡಾಯ
ಸ್ಥಳೀಯ ಬೂತ್ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ
ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ
ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ