ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ – ಸಾವಿನ ಸಂಖ್ಯೆ 13 ಕ್ಕೆ ಏರಿಕೆ

ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ – ಸಾವಿನ ಸಂಖ್ಯೆ 13 ಕ್ಕೆ ಏರಿಕೆ

ಮಧ್ಯಪ್ರದೇಶ: ಇಂದೋರ್ ನಲ್ಲಿ ರಾಮ ನವಮಿ ಆಚರಣೆ ವೇಳೆ ದೇವಸ್ಥಾನದ  ಮೆಟ್ಟಿಲುಬಾವಿ ಕುಸಿತ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 13  ಏರಿಕೆಯಾಗಿದೆ.

ರಾಮನವಮಿ ಆಚರಣೆಗೆಂದು ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಪುರಾತನ ಬಾವಡಿ (ದೊಡ್ಡ ಬಾವಿ) ಯ ಮೇಲ್ಛಾವಣೆ ಮೇಲೆ ಅನೇಕರು ನಿಂತಿದ್ದರು. ಈ ವೇಳೆ ಭಾರ ತಡೆಯಲಾಗದೆ ಮೇಲ್ಛಾವಣಿ ಕುಸಿದಿದೆ. ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಬಾವಿಗೆ ಬಿದ್ದಿದ್ದಾರೆ. ಈ ಅವಘಡದಲ್ಲಿ ಸಾವಿನ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ಈಗಾಗಲೇ ಹಲವರನ್ನು ರಕ್ಷಿಸಲಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವವರಿಗೆ ಶೋಧ ನಡೆಸಲಾಗುತ್ತಿದೆ.

ಇದನ್ನೂ ಓದಿ:ರಾಮ ನವಮಿಯಂದೇ ದುರಂತ – ದೇವಸ್ಥಾನದ ಬಾವಿಗೆ ಬಿದ್ದ 25 ಮಂದಿ

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ  ಹಾಗೂ ಗಾಯಗೊಂಡವರಿಗೆ ₹ 50,000 ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಈ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ಇಂದೋರ್‌ನಲ್ಲಿ ನಡೆದ ದುರ್ಘಟನೆಯಿಂದ ತೀವ್ರ ನೋವಾಗಿದೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಜೊತೆ ಅವಘಡದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಸರ್ಕಾರವು ತ್ವರಿತ ಗತಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಡೆಸುತ್ತಿದೆ ಅಂತಾ ಹೇಳಿದ್ದಾರೆ.

40 ಅಡಿ ಆಳದ ಬಾವಿ ಇದಾಗಿದ್ದು ಮಕ್ಕಳು, ಮಹಿಳೆಯರು ಸೇರಿದಂತೆ  18 ಮಂದಿ ಭಕ್ತಾದಿಗಳು ಬಾವಿಯ ಒಳಗೆ ಸಿಲುಕಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

suddiyaana