ಬಿಜೆಪಿ, ಜೆಡಿಎಸ್ ಶಾಸಕರ ರಾಜೀನಾಮೆ – ಚುನಾವಣೆ ಹೊತ್ತಲ್ಲೇ ‘ಜಂಪಿಂಗ್’ ಪಾಲಿಟಿಕ್ಸ್!

ಬಿಜೆಪಿ, ಜೆಡಿಎಸ್ ಶಾಸಕರ ರಾಜೀನಾಮೆ – ಚುನಾವಣೆ ಹೊತ್ತಲ್ಲೇ ‘ಜಂಪಿಂಗ್’ ಪಾಲಿಟಿಕ್ಸ್!

ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದೇ ಆಗಿದ್ದು. ಪಕ್ಷದಿಂದ ಪಕ್ಷಕ್ಕೆ ರಾಜಕಾರಣಿಗಳ ಜಂಪಿಂಗ್ ಕೂಡ ಜೋರಾಗಿದೆ. ಇವತ್ತೇ ಇಬ್ಬರು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಕ್ ಕೊಟ್ಟಿದ್ದಾರೆ. ಆರು ಬಾರಿ ಶಾಸಕರಾಗಿದ್ದ ಕೂಡ್ಲಗಿಯ ಬಿಜೆಪಿ ಹಿರಿಯ ಶಾಸಕ ಎನ್.ವೈ.ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶುಕ್ರವಾರ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆಗೆ ರೆಡಿಯಾಯ್ತಾ ಅಖಾಡ? – ಮೈಸೂರಲ್ಲಿ ಗರಿಗೆದರಿದ ರಾಜಕೀಯ

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶುಕ್ರವಾರ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.. ಬಿಜೆಪಿಗೆ ರಾಜೀನಾಮೆ ನೀಡಿರುವ ಗೋಪಾಲಕೃಷ್ಣ ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ. ಧರಂ ಸಿಂಗ್ ರ ಅವಧಿಯಲ್ಲಿ ಉಪ ಸಭಾಪತಿಗಳಾಗಿ, ಸಿದ್ದರಾಮಯ್ಯ ಅವರ ಅವಧಿಯಲ್ಲಿ ನಂಜುಂಡಪ್ಪ ಅನುಷ್ಟಾನ ಸಮಿತಿ ಅಧ್ಯಕ್ಷರಾಗಿ ಕಾರ್ಯ ಮಾಡಿದ್ದರು. ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದರು. ಗೋಪಾಲಕೃಷ್ಣ ನಾಲ್ಕು ಬಾರಿ ಶಾಸಕರಾಗಿ ಹೊರಹೊಮ್ಮಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಸೇರ್ಪಡೆ ಆಗಿ, ಟಿಕೆಟ್ ಪಡೆದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಮತ್ತೊಂದೆಡೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಎ.ಟಿ ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅರಕಲಗೂಡು ಜೆಡಿಎಸ್ ಟಿಕೆಟ್ ಮಾಜಿ ಸಚಿವ ಎ. ಮಂಜುಗೆ ಸಿಗುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ರಾಮಸ್ವಾಮಿ ಜೆಡಿಎಸ್ ತೊರೆಯುತ್ತಿದ್ದಾರೆ. ಆದ್ರೆ ರಾಮಸ್ವಾಮಿಯವರ ಮುಂದಿನ ನಡೆ ಏನು ಎನ್ನುವುದು ಇನ್ನೂ ನಿಗೂಢವಾಗಿದೆ.

suddiyaana