ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಮೋದಿ ಭೇಟಿ – ಏ. 6 ರಿಂದ 9 ರವರೆಗೆ ಏನೆಲ್ಲಾ ಬಂದ್?
ಚಾಮರಾಜನಗರ: ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷ ತುಂಬಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 9 ರಂದು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲಿದ್ದಾರೆ. ಅಷ್ಟೇ ಅಲ್ಲದೇ ಉದ್ಯಾನವನದಲ್ಲಿ ಸಫಾರಿ ನಡೆಸಲಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ಹೆಚ್ಚಾಯ್ತು ಕೊರೊನಾ ಕೇಸ್ – ಆನ್ ಲೈನ್ ನಲ್ಲೇ ವಾದ ಮಂಡಿಸಿ ಎಂದ ಸುಪ್ರೀಂ ಜಡ್ಜ್
ಈ ಹಿನ್ನೆಲೆ ಏಪ್ರಿಲ್ 6 ರಿಂದ 9 ರವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೇ ಬಂಡೀಪುರ ವ್ಯಾಪ್ತಿಯ ಎಲ್ಲಾ ಹೋಂಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿರ್ಬಂಧಿಸಲಾಗಿದೆ. ರಸ್ತೆ ನಿರ್ವಹಣೆ, ಪೂರ್ವ ಸಿದ್ದತೆ, ಹಾಗೂ ರಕ್ಷಣೆ ದೃಷ್ಟಿಯಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಅಂತಾ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ತಿಳಿಸಿದ್ದಾರೆ.
ಏಪ್ರಿಲ್ 9ರಂದು ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಇತ್ತೀಚಿನ ಹುಲಿಗಣತಿ ವರದಿ, ಹುಲಿ ಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ, ಮತ್ತು ನಾಣ್ಯ ಸ್ಮರಣಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.