ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗೆ ಬ್ರೇಕ್ – ವಿರೋಧ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ವಾಪಸ್
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಬಿಡುಗಡೆ ಮಾಡಿದ್ದ ಅನುದಾನಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿತ್ತು. ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಇದೀಗ ಅನುದಾನಕ್ಕೆ ಬ್ರೇಕ್ ನೀಡಿದ್ದ ಸುತ್ತೋಲೆಯನ್ನು ಸರ್ಕಾರ ಹಿಂದಕ್ಕೆ ಪಡೆದಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಜರಾಯಿ ಇಲಾಖೆ ಆಯುಕ್ತ ಬಸವರಾಜೇಂದ್ರ, ಸಚಿವರ ಗಮನಕ್ಕೆ ಬಾರದೇ ಈ ಆದೇಶ ಪ್ರಕಟಿಸಲಾಗಿತ್ತು. ಈಗ ಆದೇಶವನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ನಿರಂತರ ಮಳೆಗೆ ತತ್ತರಿಸಿದ ಹಿಮಾಚಲ ಪ್ರದೇಶ – ಆರ್ಥಿಕ ನೆರವು ಘೋಷಿಸಿದ ಛತ್ತೀಸ್‌ಗಢ ಸಿಎಂ
ಜಿಲ್ಲೆಯಾದ್ಯಾಂತ ಮುಜರಾಯಿ ವ್ಯಾಪ್ತಿಯ ಕಾಮಗಾರಿಗಳು ನಡೆಯುತ್ತಿತ್ತು. ಈ ಕಾಮಗಾರಿ ಮಾಡಲು 50% ಅನುದಾನವನ್ನು ಬಿಡುಗಡೆ ಮಾಡಿ ತಡೆ ಹಿಡಿಯಲಾಗಿತ್ತು. ನಮ್ಮ ವ್ಯಾಪ್ತಿಯಲ್ಲಿ ನಾವು ಆದೇಶ ಹೊರಡಿಸಿದ್ದೆವು. ಈಗ ಮತ್ತೊಂದು ಆದೇಶವನ್ನು ಪ್ರಕಟಿಸಿದ್ದೇವೆ ಎಂದು ಹೇಳಿದ್ದಾರೆ.
ಆಗಸ್ಟ್ 14 ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದ ಮುಜರಾಯಿ ಇಲಾಖೆ ದೇವಾಲಯದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕೆ ಮಂಜೂರಾದ ಹಣದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಡೆಸದಂತೆ ಉಲ್ಲೇಖಿಸಿತ್ತು.