ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧೆ ಮಾಡುವಂತೆ ಪಟ್ಟು – ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೈಡ್ರಾಮಾ!

ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧೆ ಮಾಡುವಂತೆ ಪಟ್ಟು – ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೈಡ್ರಾಮಾ!

ಸಿದ್ದರಾಮಯ್ಯ ಹೇಳಿ ಕೇಳಿ ಮಾಸ್ ಲೀಡರ್. ರಾಜ್ಯದುದ್ದಗಲಕ್ಕೂ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಆದ್ರೀಗ ಚುನಾವಣಾ ಕ್ಷೇತ್ರದ ವಿಚಾರವಾಗಿ ಭಾರೀ ಗೊಂದಲ ಶುರುವಾಗಿದೆ. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲ್ಲ ಎಂಬ ಸುದ್ದಿ ಹರಿದಾಡುತ್ತಿದ್ದು ಬೆಂಬಲಿಗರು ಸಿಡಿದೆದ್ದಿದ್ದಾರೆ. ಸಿದ್ದರಾಮಯ್ಯ ಕೋಲಾರದಿಂದಲೇ ಕಣಕ್ಕಿಳಿಯಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ : ಕುಂದಾನಗರಿಯಲ್ಲಿ ಕಾಂಗ್ರೆಸ್ ಯುವಕ್ರಾಂತಿ ರಣಕಹಳೆ – ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ಭತ್ಯೆ..!
ಕಳೆದ ವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ವೇಳೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ್ದರು. ಈ ವೇಳೆ ಕೋಲಾರದಿಂದ ನೀವು ಸ್ಪರ್ಧೆ ಮಾಡಬೇಡಿ ಎಂದು ಸಲಹೆ ನೀಡಿದ್ದರು ಎನ್ನಲಾಗಿದೆ. ಇದಾದ ಬಳಿಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಲ್ಲ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ ಕಡೆ ಸ್ಪರ್ಧೆ ಮಾಡುವುದಾಗಿ ಹೇಳಿದ್ದರು. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಪರ್ಧಿಸಿ ಗೆದ್ದು ಈ ಬಾರಿ ಅಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆರಂಭದಲ್ಲಿಯೇ ಹೇಳಿದ್ದರು. ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಹೋಗಿ ಅಲ್ಲಿ ಘೋಷಣೆ ಮಾಡಿ ಸರ್ವೆ ಮಾಡಿಸಿ ಅಲ್ಲಿನ ಚುನಾವಣಾ ವಾತಾವರಣ ತಮಗೆ ಅನುಕೂಲವಾಗಿಲ್ಲ ಎಂದು ಹಿಂದೆ ಸರಿಯುತ್ತಿದ್ದಾರೆ. ತಮ್ಮ ಸ್ಪರ್ಧೆ ಹೈಕಮಾಂಡ್ ಗೆ ಬಿಟ್ಟ ವಿಚಾರ, ಹೈಕಮಾಂಡ್ ಹೇಳಿದಲ್ಲಿ ನಿಲ್ಲುತ್ತೇನೆ ಎನ್ನುತ್ತಿದ್ದಾರೆ.

ಸಿದ್ದರಾಮಯ್ಯ ಕೋಲಾರ(Kolar)ದಿಂದ ಸ್ಪರ್ಧೆ ಮಾಡುವ ಬಗ್ಗೆ ಇಂದು ಬೆಂಗಳೂರಿನ ಅವರ ಸರ್ಕಾರಿ ನಿವಾಸದ ಮನೆ ಮುಂದೆ ರಾಜಕೀಯ(Politics) ಹೈಡ್ರಾಮಾ ನಡೆದಿದ್ದು, ಕೋಲಾರ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಸ್ಪರ್ಧಿಸಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಶರ್ಟ್​ ಬಿಚ್ಚಿ ಬಾರುಕೋಲಿನಿಂದ ಹೊಡೆದುಕೊಂಡು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಹುಟ್ಟೂರು ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ, ಚಾಮುಂಡೇಶ್ವರಿಯಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲನುಭವಿಸಿ, ಬಾದಾಮಿಯಿಂದ 1,500 ಮತಗಳಿಂದ ಗೆದ್ದಿದ್ದರು.

suddiyaana