ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ರಾಶಿ ರಾಶಿ ದುಡ್ಡು – ₹8 ಕೋಟಿ ಹಣದ ಹಿಂದಿನ ಗುಟ್ಟೇನು..?

ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ರಾಶಿ ರಾಶಿ ದುಡ್ಡು – ₹8 ಕೋಟಿ ಹಣದ ಹಿಂದಿನ ಗುಟ್ಟೇನು..?

ವಿಧಾನಸಭಾ ಚುನಾವಣಾ ಕಾವು ಏರುತ್ತಿರುವ ಹೊತ್ತಲ್ಲೇ ಹಣದ ಹೊಳೆಯೂ ಹರಿಯೋಕೆ ಆರಂಭವಾಗಿದೆ.  ದಾವಣಗೆರೆ ಜಿಲ್ಲೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಶಾಸಕರ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮೇಲೆಯೂ ದಾಳಿ ಮಾಡಿ ರಾಶಿ ರಾಶಿ ಹಣ ಸೀಜ್ ಮಾಡಿದ್ದಾರೆ.

ಇದನ್ನೂ ಓದಿ : ಕ್ಯಾಂಪಸ್ ನಲ್ಲಿ ಪ್ರತಿಭಟಿಸಿದ್ರೆ ₹20 ಸಾವಿರ ದಂಡ – ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಕಿಂಥಾ ಶಿಕ್ಷೆ?

ಗುರುವಾರ (ಮಾರ್ಚ್ 2) ಸಂಜೆ 6.30ರ ಸುಮಾರಿಗೆ ರೇಡ್ ಮಾಡಿದ್ದ ಲೋಕಾಯುಕ್ತ ಪೊಲೀಸರು ಬರೋಬ್ಬರಿ ಒಂಭತ್ತೂವರೆ ಗಂಟೆಗಳ ಕಾಲ ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗಿನ ಜಾವ 4 ಗಂಟೆ ವೇಳೆಗೆ ಪರಿಶೀಲನೆ ಅಂತ್ಯವಾಗಿದೆ. ದಾಳಿ ವೇಳೆ ಡಾಲರ್ಸ್​ ಕಾಲೋನಿಯಲ್ಲಿರುವ ನಿವಾಸದಲ್ಲಿ ದಾಖಲೆ ಇಲ್ಲದ 6.10 ಕೋಟಿ ನಗದು ಪತ್ತೆಯಾಗಿದೆ. ಹಾಗೇ ಕಚೇರಿಯಲ್ಲಿ 2.2 ಕೋಟಿ ಪತ್ತೆಯಾಗಿದೆ. ಒಟ್ಟಾರೆ 8.12 ಕೋಟಿ ಹಣವನ್ನ ಸೀಜ್ ಮಾಡಲಾಗಿದೆ.

ರಾತ್ರಿಯಿಡೀ ಪ್ರಶಾಂತ್ ಮತ್ತು ನಾಲ್ವರ ವಿಚಾರಣೆ ನಡೆಸಲಾಗಿದೆ. ಆದ್ರೆ ದಾಳಿ ವೇಳೆ ಮನೆಯಲ್ಲಿ ಚಿನ್ನಾಭರಣ ಮತ್ತು ಆಸ್ತಿಪತ್ರ ಎಷ್ಟೆಷ್ಟು ಸಿಕ್ಕಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ.

ಬೆಂಗಳೂರು ಮೂಲದ ಗುತ್ತಿಗೆದಾರ ಶ್ರೇಯಸ್ ಕಶ್ಯಪ್ ಎಂಬುವವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಲೋಕಾಯುಕ್ತಕ್ಕೆ ಪವರ್ ಬಂದ ಬಳಿಕ ಒಂದೇ ದಾಳಿಯಲ್ಲಿ ಕೋಟಿ ಕೋಟಿ ಹಣ ಪತ್ತೆ ಹಚ್ಚಿದ್ದಾರೆ.

ಇದೀಗ ಲೋಕಾಯುಕ್ತ ಅಧಿಕಾರಿಗಳು ಹಣದ ಮೂಲವನ್ನು ಪತ್ತೆ ಹಚ್ಚುತ್ತಿದ್ದಾರೆ. ಇಷ್ಟು ಹಣ ಎಲ್ಲಿಂದ ಬಂತು, ಹಣದ ಮೂಲ ಯಾವುದು, ಇವರ ಆದಾಯದ ಮೂಲಗಳು ಯಾವುದು ಎಂದು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ಪ್ರಶಾಂತ್ ಸೇರಿ ಐವರನ್ನು ಬಂಧಿಸಲಾಗಿದ್ದು, ಇವರ ಬಳಿ ಹಣದ ಮೂಲದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಪ್ರಶಾಂತ್ ಮಾಡಾಳ್ ಈ ಬಗ್ಗೆ ಏನನ್ನೂ ಬಾಯ್ಬಿಡುತ್ತಿಲ್ಲ ಎನ್ನಲಾಗಿದೆ.

ಇನ್ನು ಕ್ರೆಸೆಂಟ್ ರಸ್ತೆಯ ಕಚೇರಿ ಹಾಗೂ ಸಂಜಯನಗರದ ಮನೆಯಲ್ಲಿಯೂ ಹಣ ಪತ್ತೆಯಾಗಿದೆ. ಕೆಎಸ್ಡಿಎಲ್ ಎಂಡಿ ಮನೆಯ ಮೇಲೆ ಕೂಡ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ

suddiyaana