ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ದೇವರಿಗೆ ಹರಕೆ ಸಲ್ಲಿಕೆ – ಚಿನ್ನಲೇಪಿತ ಬೆಳ್ಳಿ ನಾಗಾಭರಣ ಸಲ್ಲಿಸಿದ ಅಭಿಮಾನಿ

ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ದೇವರಿಗೆ ಹರಕೆ ಸಲ್ಲಿಕೆ – ಚಿನ್ನಲೇಪಿತ ಬೆಳ್ಳಿ ನಾಗಾಭರಣ ಸಲ್ಲಿಸಿದ ಅಭಿಮಾನಿ

2023ರ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅದರಲ್ಲೂ ಸಿದ್ದರಾಮಯ್ಯ 2ನೇ ಬಾರಿಗೆ ಸಿಎಂ ಕುರ್ಚಿಗೇರಿದ್ದಾರೆ. ಇದೀಗ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಆಗಿದ್ದಕ್ಕೆ ಅವರ ಅಭಿಮಾನಿಯೊಬ್ಬರು ದೇವರಿಗೆ ಹರಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ : ಎನ್ ಡಿಎ ಸಭೆಗೂ ಜೆಡಿಎಸ್ ಗೆ ಆಹ್ವಾನವಿಲ್ಲ – ಕಾದು ನೋಡಲು ಮುಂದಾದ ಹೆಚ್.ಡಿ ಕುಮಾರಸ್ವಾಮಿ

ಅನ್ನರಾಮಯ್ಯ ಅಂತಾನೇ ಕರೆಸಿಕೊಳ್ಳುವ ಸಿದ್ದರಾಮಯ್ಯರಿಗೆ ರಾಜ್ಯಾದ್ಯಂತ ಅಭಿಮಾನಿಗಳಿದ್ದಾರೆ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲೆಲ್ಲಾ ಅಭಿಮಾನಿಗಳು ಮುಂದಿನ ಸಿಎಂ ಸಿದ್ದರಾಮಯ್ಯ ಎಂದೇ ಘೋಷಣೆ ಮಾಡುತ್ತಿದ್ದರು. ಇದೀಗ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದಲ್ಲಿರುವ ಸಿದ್ದರಾಮಯ್ಯ ಅವರ ಮನೆ ದೇವರು ಸಿದ್ದರಾಮೇಶ್ವರ ದೇವರಿಗೆ ಹರಕೆ ತೀರಿಸಿದ್ದಾರೆ. ಅನಿವಾಸಿ ಭಾರತೀಯ ರವಿಮಹಾದೇವ, ದೇವರಿಗೆ ಚಿನ್ನಲೇಪಿತ ಬೆಳ್ಳಿಯ ನಾಗಾಭರಣ ನೀಡಿ ಹರಕೆ ಸಲ್ಲಿಸಿದ್ದಾರೆ.

ದೇವೇಗೌಡನಹುಂಡಿಯ ಮಹಾದೇವರ ಪುತ್ರ ರವಿ ಸದ್ಯ ಸೌದಿ ಅರೇಬಿಯಾದಲ್ಲಿ ವಾಸವಾಗಿದ್ದಾರೆ. ಸಾಗರೋತ್ತರ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಹಾಗೂ ಜಂಟಿ ಕಾರ್ಯದರ್ಶಿ ಕೂಡ ಆಗಿದ್ದು, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಹರಕೆ ಅರ್ಪಣೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಈ ಹರಕೆ ಸಲ್ಲಿಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಮನೆದೇವರಾದ ಸಿದ್ದರಾಮನಹುಂಡಿ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ಚಿನ್ನಲೇಪಿತ ಬೆಳ್ಳಿಯ ನಾಗಾಭರಣವನ್ನು ಹರಕೆಯಾಗಿ ಅರ್ಪಿಸಿದ್ದಾರೆ. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಈ ಹರಕೆ ಸಲ್ಲಿಸಿದರು.

suddiyaana