ಮುಳ್ಳಯ್ಯನಗಿರಿ ಗುಡ್ಡದಲ್ಲಿ ಹಬ್ಬಿದ ಕಾಡ್ಗಿಚ್ಚುಚ್ಚು – 500 ಎಕರೆಯಷ್ಟು ಸಸ್ಯ ಸಂಪತ್ತು ಸುಟ್ಟು ಭಸ್ಮ

ಮುಳ್ಳಯ್ಯನಗಿರಿ ಗುಡ್ಡದಲ್ಲಿ ಹಬ್ಬಿದ ಕಾಡ್ಗಿಚ್ಚುಚ್ಚು – 500 ಎಕರೆಯಷ್ಟು ಸಸ್ಯ ಸಂಪತ್ತು ಸುಟ್ಟು ಭಸ್ಮ

ಬೇಸಿಗೆಗಾಲ ಆರಂಭವಾಗುತ್ತಿದ್ದಂತೆ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಹೆಚ್ಚಾಗುತ್ತಿದೆ. ಇದೀಗ ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ದೇಶ-ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವಾಗಿರುವ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕಾಡ್ಗಿಚ್ಚು ಹಬ್ಬಿದೆ. ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆಯ ಸಸ್ಯ ಸಂಪತ್ತು ಸುಟ್ಟು ಕರಕಲಾಗಿದೆ.

ಇದನ್ನೂ ಓದಿ: ಸಂಸದೆ ಸುಮಲತಾ ಮಂಡ್ಯದಿಂದಲೇ ಸ್ಪರ್ಧಿಸ್ತಾರಾ..?- ಕಾಂಗ್ರೆಸ್ ಮಾಡಿಕೊಂಡಿರೋ ಮೆಗಾ ಪ್ಲ್ಯಾನ್ ಏನು..?

ಕಳೆದ ಕೆಲವು ದಿನಗಳಿಂದ ಮುಳ್ಳಯನಗಿರಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ 500 ಎಕರೆಯಷ್ಟು ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ. ನೂರಾರು ಪ್ರಾಣಿ, ಪಕ್ಷಿಗಳು ಸಜೀವ ದಹನಗೊಂಡಿವೆ. ಈ ಬೆಂಕಿ ಅವಘಡ ಸಂಭವಿಸಲು ಚಾರಣಿಗನೊಬ್ಬನ ಸಿಗರೇಟು ಕಾರಣ. ಚಾರಣಿಗನೊಬ್ಬ ಕಾರಲ್ಲಿ ಹೋಗುವಾಗ ಸಿಗರೇಟಿನ ತುಂಡು ಎಸೆದ ಪರಿಣಾಮ ಕಾಡ್ಗಿಚ್ಚು ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕಂದಾಯ ಇಲಾಖೆಯೊಂದಿಗೆ ಮಾತುಕತೆ ನಡೆಸಿ ಕನಿಷ್ಠ ಮೂರು ತಿಂಗಳ ಕಾಲ ಅರಣ್ಯ ಪ್ರದೇಶ ಮತ್ತು ಸುತ್ತಮುತ್ತಲಿನ ಟ್ರೆಕ್ಕಿಂಗ್ ಮತ್ತು ಇತರ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಿಲ್ಲಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯು ಸಫಾರಿಗಳಲ್ಲಿಯೂ ಸಹ ಅರಣ್ಯ ಪ್ರದೇಶಗಳ ಮೂಲಕ ಹಾದುಹೋಗುವ ಜನರ ಸಂಚಾರವನ್ನು ನಿಯಂತ್ರಿಸುವ ಕೆಲಸ ಮಾಡಲಾಗುತ್ತಿದೆ.

Shwetha M