ಲವ್ ಮ್ಯಾರೇಜ್ ಆಗಿ ನಾಲ್ಕೇ ತಿಂಗಳಿಗೆ ನವವಿವಾಹಿತೆ ಸೂ*ಸೈಡ್ – ಗಂಡನ ಮನೆಯಲ್ಲಿ ಆಗಿದ್ದೇನು?

ಲವ್ ಮ್ಯಾರೇಜ್ ಆಗಿ ನಾಲ್ಕೇ ತಿಂಗಳಿಗೆ ನವವಿವಾಹಿತೆ ಸೂ*ಸೈಡ್ – ಗಂಡನ ಮನೆಯಲ್ಲಿ ಆಗಿದ್ದೇನು?

ಮದುವೆಯಾಗಿ ಕೇವಲ ನಾಲ್ಕು ತಿಂಗಳಿಗೆ  ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತ ದುರ್ದೈವಿ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಈಕೆ  ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರೇ. ಈಗ ಡೇತ್‌ ನೋಟ್ ಬರೆದಿಟ್ಟು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸ್ವಿಜರ್‌ಲೆಂಡ್‌ ಮಣಿಸಿ ಫಿಫಾ ಸೆಮಿಫೈನಲ್‌ಗೆ ಎಂಟ್ರಿಕೊಟ್ಟ ಅರ್ಜೆಂಟೀನಾ

ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ವೈವಾಹಿಕ ಜೀವನ ಆರಂಭವಾದ ಕೆಲವೇ ತಿಂಗಳುಗಳಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಆಕೆ ಬರೆದಿಟ್ಟಿರುವ ಡೆತ್‌ನೋಟ್ ಈಗ ಲಭ್ಯವಾಗಿದ್ದು, ಅದರಲ್ಲಿ ಪತಿ ಹಾಗೂ ಪತಿಯ ಅಕ್ಕನ ಕಿರುಕುಳದ ಬಗ್ಗೆ ಆರೋಪ ಮಾಡಲಾಗಿದೆ.

ನನ್ನ ಸಾವಿಗೆ ನನ್ನ ಗಂಡ ಮತ್ತು ಅವರ ಅಕ್ಕನೇ ಕಾರಣ. ಅವರಿಂದ ನನಗೆ ಹಿಂಸೆ ಆಗುತ್ತಿತ್ತು. ಇನ್ನು ಮುಂದೆ ನನಗೆ ಬದುಕಲು ಆಸೆಯೇ ಇಲ್ಲ ಎನ್ನುವ ರೀತಿ ಮಾಡಿದ್ದಾರೆ. ನನ್ನ ಸಾವಿಗೆ ಅವರನ್ನ ಮಾತ್ರ ಸುಮ್ಮನೆ ಬಿಡಬೇಡ ಅಮ್ಮ. ನನ್ನಿಂದ ತಪ್ಪಾಗಿದೆ ಕ್ಷಮಿಸು ಇಂತಿ ನಿನ್ನ ಪ್ರೀತಿಯ ಮಗಳು ಶ್ವೇತಾ ಎಂದು ಬರೆದಿದ್ದಾರೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್‌ನೋಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Kishor KV

Leave a Reply

Your email address will not be published. Required fields are marked *