ಬ್ಯಾಂಕಾಕ್‌ನಿಂದ ಬಂದವನ ಬ್ಯಾಗ್‌ನಲ್ಲಿತ್ತು ಮೊಸಳೆ, ಕಾಂಗರೂ ಸೇರಿ 234  ಅಪರೂಪದ ವನ್ಯಜೀವಿಗಳು!

ಬ್ಯಾಂಕಾಕ್‌ನಿಂದ ಬಂದವನ ಬ್ಯಾಗ್‌ನಲ್ಲಿತ್ತು ಮೊಸಳೆ, ಕಾಂಗರೂ ಸೇರಿ 234  ಅಪರೂಪದ ವನ್ಯಜೀವಿಗಳು!

ಬೆಂಗಳೂರು: ಅಂತರಾಷ್ಟ್ರೀಯ ಕೆಲ ಪ್ರಯಾಣಿಕರು ಅಪರೂಪದ ಕೆಲ ವನ್ಯ ಜೀವಿಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಲೇ ಇದೆ. ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಅಪರೂಪದ ವನ್ಯಜೀವಿಗಳು, ಜಲಚರಗಳು ಹಾಗೂ ಸರಿಸೃಪಗಳನ್ನು ಟ್ರಾಲಿ ಬ್ಯಾಗ್‌ನಲ್ಲಿ ಬಚ್ಚಿಟ್ಟು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕಂದು ಬಣ್ಣದ ಮರಿಗೆ ಜನ್ಮ ನೀಡಿದ ಜಿರಾಫೆ! –  ಅಪರೂಪದಲ್ಲಿ ಅಪರೂಪ ಎಂದ ಮೃಗಾಲಯದ ಸಿಬ್ಬಂದಿ

ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಫ್‌.ಡಿ-137 ಸಂಖ್ಯೆ ವಿಮಾನದಲ್ಲಿ ಆಗಮಿಸಿದ್ದ ಪ್ರಯಾಣಿಕ ತನ್ನ ಎರಡು ಟ್ರಾಲಿ ಬ್ಯಾಗ್‌ಗಳಲ್ಲಿ ಹೆಬ್ಬಾವು ಮರಿ, ಊಸರವಳ್ಳಿ, ಮೊಸಳೆ ಮರಿ, ಆಮೆಗಳು, ಮರಿ ಕಾಂಗರೂ ಸೇರಿದಂತೆ 234 ವನ್ಯಜೀವಿಗಳನ್ನು ಅಕ್ರಮವಾಗಿ ತಂದಿದ್ದ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ನಿರ್ಗಮನ ದ್ವಾರದ ಬಳಿ ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ಮಾಡುವಾಗ, ಪ್ರಯಾಣಿಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸಿದ್ದಾನೆ. ಆತನನ್ನು ವಶಕ್ಕೆ ಪಡೆದು ಆತನ ಟ್ರಾಲಿ ಬ್ಯಾಗ್‌ ಪರಿಶೀಲಿಸಿದಾಗ ವನ್ಯಜೀವಿಗಳನ್ನು ಕಳ್ಳ ಸಾಗಣೆ ಮಾಡುತ್ತಿರುವುದು ಕಂಡು ಬಂದಿದೆ. ಇದೇ ವಿಮಾನದಲ್ಲಿ ವಾರಸುದಾರರು ಇಲ್ಲದ ಮತ್ತೊಂದು ಟ್ರಾಲಿ ಬ್ಯಾಗ್‌ ಪತ್ತೆಯಾಗಿದ್ದು, ಅದರಲ್ಲಿಯೂ ವನ್ಯಜೀವಿಗಳು ಇರುವುದು ಕಂಡು ಬಂದಿದೆ. ಈ ಸಂಬಂಧ ವನ್ಯಜೀವಿಗಳ ಕಳ್ಳ ಸಾಗಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಕಸ್ಟಮ್ಸ್‌ ಅಧಿಕಾರಿಗಳು, ಆತನನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

suddiyaana