ಕ್ಯಾಪ್ಟನ್ಸಿ ಟಾಸ್ಕ್ ಆಯ್ಕೆ ವೇಳೆ ಸಂಗೀತಾ ಮತ್ತು ಕಾರ್ತಿಕ್ ನಡುವೆ ಬಿರುಕು – ನಮ್ರತಾ ವಿಚಾರಕ್ಕೆ ಕೊನೆಯಾಗುತ್ತಾ ಸುಂದರ ಸ್ನೇಹ?
ಬಿಗ್ ಬಾಸ್ ಕನ್ನಡ 10ನೇ ಸೀಸನ್ ಆರಂಭದಿಂದಲೇ ಬಣಗಳಾಗಿದ್ದು ನಿತ್ಯವೂ ಒಂದಿಲ್ಲೊಂದು ವಿಚಾರಕ್ಕೆ ಜಗಳ ನಡೆಯುತ್ತಲೇ ಇರುತ್ತದೆ. ಪ್ರತೀ ಸೀಸನ್ ನಲ್ಲಿ ಟಾಸ್ಕ್ ಬಂದಾಗಷ್ಟೇ ಸ್ಪರ್ಧಿಗಳು ಎದುರುಬದುರಾಗುತ್ತಿದ್ರು. ಆದರೆ ಈ ಬಾರಿ ಸಣ್ಣ ಪುಟ್ಟ ವಿಚಾರಗಳಿಗೂ ಜಗಳಗಳು ನಡೆಯುತ್ತಿವೆ. ಒಬ್ಬರನ್ನ ಕಂಡರೆ ಮತ್ತೊಬ್ಬರಿಗೆ ಆಗದಷ್ಟರ ಮಟ್ಟಿಗೆ ಅಸಮಾಧಾನಗಳಿವೆ. ಇವುಗಳ ನಡುವೆ ಜನರಿಗೆ ಇಷ್ಟವಾಗುತ್ತಿದ್ದ ಜೋಡಿ ಅಂದ್ರೆ ಅದು ಕಾರ್ತಿಕ್ ಮತ್ತು ಸಂಗೀತಾ ಜೋಡಿ ಮಾತ್ರ. ಇದೀಗ ಆ ಜೋಡಿಯೂ ದೂರವಾಗುವಂತಹ ಸಂದರ್ಭ ಕ್ರಿಯೇಟ್ ಆಗಿದೆ.
ವಿಜಯದಶಮಿ ದಿನ ನಟಿ ತಾರಾ ಬಿಗ್ ಬಾಸ್ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಎಲ್ಲರ ನಡುವೆ ಒಳ್ಳೆಯ ಸಂಬಂಧ ಸೃಷ್ಟಿಯಾಗಿತ್ತು. ಎಲ್ಲರೂ ಖುಷಿ ಖುಷಿಯಿಂದ ಮಾತನಾಡುತ್ತಿದ್ದರು. ಆದರೆ ಇದೀಗ ಮನೆಯ ವಾತಾವರಣ ಮತ್ತೆ ಹದಗೆಟ್ಟಿದೆ. ಕ್ಯಾಪ್ಟನ್ಸಿ ಟಾಸ್ಕ್‌ನ ಬಿಸಿ ಸ್ಪರ್ಧಿಗಳ ನಡುವಿನ ಭಿನ್ನಾಭಿಪ್ರಾಯ ಹೆಚ್ಚಿಸುತ್ತಿದೆ. ಮನೆಯ ಕ್ಯಾಪ್ಟನ್ ಆಗಲು ಅರ್ಹರಾದ ಇಬ್ಬರು ಸದಸ್ಯರನ್ನು ಮನೆಯ ಎಲ್ಲ ಸದಸ್ಯರೂ ಆರಿಸಬೇಕು ಎಂದು ಬಿಗ್‌ಬಾಸ್ (Bigg Boss Kannada) ಆದೇಶ ನೀಡಿದ್ದರು. ಸಂಗೀತಾ, ‘ತಾನು ಲೀಡರ್ ಆಗಬೇಕು ಅಂದುಕೊಂಡಿದ್ದೇನೆ’ ಎಂದು ಘೋಷಿಸಿದ್ದಾರೆ. ಆದರೆ ಅವರ ಆಪ್ತಸ್ನೇಹಿತ ಕಾರ್ತಿಕ್ ಅವರೇ ನಮ್ರತಾ ಮತ್ತು ತನಿಷಾ ಅವರನ್ನು ಕ್ಯಾಪ್ಟನ್ ಆಗಲು ಅರ್ಹರು ಎಂದು ಹೇಳಿ ಸೂಚಿಸಿದರು. ಇದು ಸಂಗೀತಾ ಅವರನ್ನು ಕೆರಳಿಸಿದೆ. ಮನಸಲ್ಲಿದ್ದುದನ್ನು ನೇರವಾಗಿ ಹೇಳಿಬಿಡುವ ಅಭ್ಯಾಸ ಇರುವ ಸಂಗೀತಾ ಈ ವಿಷಯವನ್ನೂ ಕಾರ್ತಿಕ್ ಬಳಿ ನೇರವಾಗಿಯೇ ಕೇಳಿದ್ದಾರೆ.
ಇದನ್ನೂ ಓದಿ : 20 ಸಾವಿರ ರೂಪಾಯಿಗೆ ಹುಲಿ ಉಗುರು ಖರೀದಿಸಿದ್ದರಂತೆ ವರ್ತೂರು ಸಂತೋಷ್ – ಸೆಲೆಬ್ರಿಟಿಗಳನ್ನು ಚುಚ್ಚುತ್ತಿದೆ ಹುಲಿ ಉಗುರು
ಕಾರ್ತಿಕ್ ಮತ್ತು ಸಂಗೀತಾ ನಡುವೆ ಆರಂಭದಿಂದಲೂ ಸ್ನೇಹ ಚೆನ್ನಾಗಿದೆ. ಸ್ನೇಹಕ್ಕೂ ಮೀರಿದ ಸಂಬಂಧ ಗಟ್ಟಿಯಾಗುತ್ತಿದೆ ಎಂಬ ಅರ್ಥದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಗಳೂ ಶುರುವಾಗಿದೆ. ಕ್ಯಾಪ್ಟನ್ಸಿ ಆಯ್ಕೆ ಸೂಚನಾ ಪ್ರಕ್ರಿಯೆ ಮುಗಿದ ಮೇಲೆ ಸಂಗೀತಾ, ‘ನೀನ್ಯಾಕೆ ನನ್ನನ್ನು ಆಯ್ಕೆ ಮಾಡಿಕೊಂಡಿಲ್ಲ’ ಎಂದು ಕಾರ್ತಿಕ್ ಅವರ ಬಳಿ ಕೇಳಿದ್ದಾರೆ. ಹಾಗೆಯೇ, ‘ಯಾಕೆ ನಮ್ರತಾ?’ ಎಂದೂ ಕೇಳಿದ್ದಾರೆ. ಅದಕ್ಕೆ ಕಾರ್ತಿಕ್ ನೇರವಾಗಿ ಉತ್ತರಿಸದೆ, ‘ಕೋಪ ಯಾಕೆ ಮಾಡ್ಕೋತಿಯಾ?’ ಎಂದು ಅನುನಯಿಸಲು ಹೋಗಿದ್ದಾರೆ. ‘ನಾನು ಯಾರ ಮೇಲೂ ಡಿಪೆಂಡ್ ಆಗಿ ಬಂದಿಲ್ಲ ಇಲ್ಲಿ. ಜೊತೆಗಿದ್ದೋರೇ ಚುಚ್ಚುವುದು’ ಎಂದೆಲ್ಲ ಜರಿದಿದ್ದಾರೆ. ಕೊನೆಗೆ ‘ಯು ಆರ್ ಫೇಕ್’ ಎಂಬ ಮಾತು ಸಂಗೀತಾ ಬಾಯಲ್ಲಿ ಹೊರಬೀಳುತ್ತಿದ್ದಂತೆಯೇ ಕಾರ್ತಿಕ್ ಅಲ್ಲಿಂದ ಎದ್ದು ಹೊರಟು ಹೋಗಿದ್ದಾರೆ.
ಬಿಗ್‌ಬಾಸ್ ಮನೆಯ ಬೆಸ್ಟ್ ಜೋಡಿ ಅಂತಲೇ ಗುರ್ತಿಸಿಕೊಂಡಿದ್ದ, ಸದಾ ಒಬ್ಬರಿಗೊಬ್ಬರು ಸಪೋರ್ಟ್ ಮಾಡುತ್ತ, ಒಬ್ಬರ ಸಲಹೆಯನ್ನು ಇನ್ನೊಬ್ಬರು ಕೇಳುತ್ತ ಬಂದಿದ್ದ ಕಾರ್ತಿಕ್ ಮತ್ತು ಸಂಗೀತಾ ಈ ಕಾರಣಕ್ಕಾಗಿಯೇ ಹಲವು ಸಲ ಉಳಿದವರ ಕೆಂಗಣ್ಣಿಗೆ ಗುರಿಯಾಗಿದ್ದಿದೆ. ಯಾವಾಗಲೂ ಹ್ಯಾಪಿಯಾಗಿರುತ್ತಿದ್ದ ಕಾರ್ತಿಕ್ ಮತ್ತು ಸಂಗೀತ ಬೇರೆಯಾಗಿದ್ದಾರೆಯೇ? ಅವರ ನಡುವೆ ಒಡಕು ಮೂಡಿದೆಯೇ? ಪರಸ್ಪರ ಹಳೆಯದನ್ನು ಮರೆತು ಒಂದಾಗುತ್ತಾರಾ? ಅಥವಾ ಅವರಿಬ್ಬರ ನಡುವಿನ ಭಿನ್ನಾಭಿಪ್ರಾಯ ಮುಂದುವರಿದುಕೊಂಡೇ ಹೋಗುತ್ತದಾ? ನೋಡಬೇಕು.