ಇದ್ದಕ್ಕಿದ್ದಂತೆ ರಸ್ತೆಯಲ್ಲಿ ದೊಡ್ಡ ಶಬ್ದ – ಭೂಕಂಪವೆಂದುಕೊಂಡ್ರೆ ಇಲ್ಲಿ ಆಗಿದ್ದೇ ಬೇರೆ!

ಇದ್ದಕ್ಕಿದ್ದಂತೆ ರಸ್ತೆಯಲ್ಲಿ ದೊಡ್ಡ ಶಬ್ದ – ಭೂಕಂಪವೆಂದುಕೊಂಡ್ರೆ ಇಲ್ಲಿ ಆಗಿದ್ದೇ ಬೇರೆ!

ಹೈದರಾಬಾದ್: ಮಳೆಗಾಲದಲ್ಲಿ ಬೆಟ್ಟ ಕುಸಿತ, ಗುಡ್ಡ ಕುಸಿತ ಸಂಭವಿಸುವುದು ಸಾಮಾನ್ಯ. ಇಂತಹ ಅವಘಡ ನಮ್ಮ ಕಣ್ಣ ಮುಂದೆಯೇ ನಡೆದುಹೋಗುತ್ತದೆ. ಆದರೆ ಹೈದರಾಬಾದ್ ನಲ್ಲಿ ಯಾವುದೇ ಮಳೆ, ಪ್ರವಾಹ ಇಲ್ಲದೆಯೂ ಜನರು ಓಡಾಟ ನಡೆಸುತ್ತಿದ್ದ ರಸ್ತೆ ಏಕಾಏಕಿ ಕುಸಿದು ಬಿದ್ದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ನಗರದ ಗೋಶಾಮಹಲ್ ಪ್ರದೇಶದಲ್ಲಿ ರಸ್ತೆಯೊಂದು ದಿಢೀರ್ ಕುಸಿದಿದ್ದು, ವಾಹನಗಳು, ಹಣ್ಣು, ತರಕಾರಿ ತುಂಬಿದ್ದ ಚೀಲಗಳು ಮಣ್ಣಿನಡಿ ಸಿಲುಕಿಕೊಂಡಿವೆ.

ಇದನ್ನೂ ಓದಿ: ‘ದೇವರೇ ನನಗೆ ಹುಡುಗಿಯನ್ನು ಕರುಣಿಸು’ – ದೇವಸ್ಥಾನದ ಹುಂಡಿಯಲ್ಲಿತ್ತು ದೇವರಿಗೆ ಬರೆದ ಪತ್ರ

ಈ ಘಟನೆ ಡಿಸೆಂಬರ್ 24ರಂದು ನಡೆದಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಹನಗಳನ್ನು ಹೊರತರುವ ಕಾರ್ಯ ಆರಂಭಿಸಿದರು. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಗೋಶಾಮಹಲ್ ಪ್ರದೇಶದಲ್ಲಿನ ಚರಂಡಿಯ ಮೇಲೆ ರಸ್ತೆ ನಿರ್ಮಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹಣ್ಣು ಮತ್ತು ತರಕಾರಿಗಳ ಮಾರಾಟ ಮಾಡುತ್ತಿದ್ದ ಜನರು ಈ ಭೂಕುಸಿತದಿಂದ ನೆಲಕ್ಕೆ ಬಿದ್ದಿದ್ದಾರೆ. ಇದ್ದಕ್ಕಿದ್ದಂತೆ ದೊಡ್ಡ ಶಬ್ದ ಕೇಳಿಸಿಕೊಂಡಿದ್ದು ರಸ್ತೆ ಮಧ್ಯವೇ ಒಡೆದುಹೋಗಿದೆ. ಹಣ್ಣುಗಳು ಮತ್ತು ತರಕಾರಿಗಳನ್ನು ತುಂಬಿದ ಚೀಲಗಳು ಹೊಂಡದಲ್ಲಿ ಹೂತುಹೋಗಿವೆ. ರಸ್ತೆಯಲ್ಲಿ ನಿಂತಿದ್ದ ವಾಹನಗಳೂ ಹೊಂಡಕ್ಕೆ ಬಿದ್ದಿವೆ. ಅಪಘಾತದ ವೇಳೆ ರಸ್ತೆಯಲ್ಲಿ ನಿಂತಿದ್ದ ಹಲವರು ಗುಂಡಿಗೆ ಬಿದ್ದಿದ್ದು, ನಂತರ ಅವರನ್ನು ರಕ್ಷಿಸಲಾಗಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಈ ವೇಳೆ ಓರ್ವ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಬಿಡುಗಡೆ ಮಾಡಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಕ್ರೇನ್‌ಗಳ ಸಹಾಯದಿಂದ ವಾಹನಗಳು ಮತ್ತು ಬಂಡಿಗಳನ್ನು ಹೊರತೆಗೆಯುವ ಕಾರ್ಯ ಪ್ರಾರಂಭಿಸಲಾಯಿತು ಎಂದು ಎಂದು ಶಾಹಿನಾಥಗಂಜ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಜಯ್ ಕುಮಾರ್ ತಿಳಿಸಿದ್ದಾರೆ.

ಈ ಘಟನೆ ಹೇಗೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ರಸ್ತೆಯನ್ನು 2009 ರಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ನಿರ್ಮಿಸಲಾಗಿದೆ ಎಂದು ಗೋಶಾಮಹಲ್ ಪ್ರದೇಶದ ಬಿಜೆಪಿ ಶಾಸಕ ರಾಜಾ ಸಿಂಗ್ ಹೇಳಿದ್ದಾರೆ.

ಈ ಸೇತುವೆ ನಿರ್ಮಾಣಕ್ಕೆ ಕಳಪೆ ಕಬ್ಬಿಣ ಬಳಸಲಾಗಿದ್ದು, ಇದರಿಂದ ಜನರ ಭಾರ ತಾಳಲಾರದೆ ಕ್ಷಣಾರ್ಧದಲ್ಲಿ ಕುಸಿದು ಬಿದ್ದಿದೆ ಎಂದು ಆರೋಪಿಸಿದ್ದಾರೆ. ಇದು ನೇರ ಭ್ರಷ್ಟಾಚಾರವಾಗಿದ್ದು, ತನಿಖೆಯಾಗಬೇಕು ಎಂದು ಇಲ್ಲಿನ ಶಾಸಕರು ಒತ್ತಾಯಿಸಿದ್ದಾರೆ.

suddiyaana