ಟ್ರಕ್‌ ಹಾಗೂ ಬಸ್‌ ನಡುವೆ ಭೀಕರ ಅಪಘಾತ – 12 ಮಂದಿ ದುರ್ಮರಣ

ಟ್ರಕ್‌ ಹಾಗೂ ಬಸ್‌ ನಡುವೆ ಭೀಕರ ಅಪಘಾತ – 12 ಮಂದಿ ದುರ್ಮರಣ

ಬೆಳ್ಳಂ ಬೆಳಗ್ಗೆ ಅಸ್ಸಾಂನ ಗೋಲಾಘಾಟ್‍ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರಕ್‌ ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿದ್ದು 12 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಪಾನ್​ನಲ್ಲಿ ಭೀಕರ ಭೂಕಂಪ –  ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ

ಬುಧವಾರ ಮುಂಜಾನೆ ಬಸ್ ತಿಲಿಂಗ ಮಂದಿರದ ಕಡೆಗೆ ಹೊರಟಿತ್ತು. ಈ ವೇಳೆ ಬಲಿಜನ್ ಪ್ರದೇಶದ ಬಳಿ ಬಸ್ ಟ್ರಕ್‍ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 12 ಮಂದಿ ಸಾವಿಗೀಡಾಗಿದ್ದಾರೆ.   25 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ಗಂಭೀರವಾಗಿ ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.  ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Shwetha M