ಶಾಪಿಂಗ್ ಮಾಲ್ನಲ್ಲಿ ಭೀಕರ ಬೆಂಕಿ ಅವಘಡ – 44 ಮಂದಿ ಸಾವು
ಆರು ಅಂತಸ್ತಿನ ಶಾಪಿಂಗ್ ಮಾಲ್ನಲ್ಲಿ ಅಗ್ನಿ ಅವಘಡ ಗುರುವಾರ ರಾತ್ರಿ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸಂಭವಿಸಿದೆ. ಈ ದುರಂತದಲ್ಲಿ 44 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಸುಮಲತಾ ಮಂಡ್ಯದಿಂದ ಸ್ಪರ್ಧಿಸಿದ್ರೆ ಗೆಲ್ಲೋದು ಕಷ್ಟನಾ..? – ಆಪ್ತರೇ ಕೈ ಕೊಟ್ಟ ಮೇಲೆ ಮುಂದೇನು?
ಬೈಲಿ ರೋಡ್ ಪ್ರದೇಶದಲ್ಲಿರುವ ಆರು ಅಂತಸ್ತಿನ ಶಾಪಿಂಗ್ ಮಾಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದಲ್ಲಿ 44 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಅಗ್ನಿಶಾಮಕ ದಳದವರು ರಕ್ಷಣೆಗೆ ದೌಡಾಯಿಸಿದ್ದಾರೆ. 22 ಮಂದಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿ ಒಟ್ಟು 33 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 10 ಮಂದಿಯನ್ನು ಶೇಖ್ ಹಸೀನಾ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬರ್ನ್ ಮತ್ತು ಪ್ಲಾಸ್ಟಿಕ್ ಸರ್ಜರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.