ಮದುವೆಗೆ ಯುವತಿ ಒಪ್ಪದಿದ್ದಕ್ಕೆ ಮನನೊಂದ ಯುವಕ ಸೂ*ಸೈಡ್ – ಡೆತ್‌ನೋಟ್‌ನಲ್ಲಿ ಏನಿದೆ ಗೊತ್ತಾ?

ಮದುವೆಗೆ ಯುವತಿ ಒಪ್ಪದಿದ್ದಕ್ಕೆ ಮನನೊಂದ ಯುವಕ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರಿನ ಯಲಹಂಕ ನ್ಯೂಟೌನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಭಿಷೇಕ್(23) ಮೃತ ಯುವಕ. ಇತ್ತೀಚೆಗಷ್ಟೇ ಅಭಿಷೇಕ್ ಖಾಸಗಿ ಕಾಲೇಜಿನಲ್ಲಿ ಬಿಕಾಂ ಮುಗಿಸಿದ್ದ. ಸದ್ಯ ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ:
ಅಭಿಷೇಕ್ ಖಾಸಗಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಯುವತಿಯ ಜೊತೆ ಪ್ರೀತಿ ಮಾಡಿದ. ಕಳೆದ ಆರೇಳು ವರ್ಷದಿಂದ ಇಬ್ಬರು ಪ್ರೀತಿ ಮಾಡುತ್ತಿದ್ದರು. ಇಬ್ಬರ ಪ್ರೀತಿ ವಿಷಯ ಯುವತಿಯ ಮನೆಯವರಿಗೆ ಗೊತ್ತಾಗಿತ್ತು. ಇತ್ತ ಯುವತಿಯ ಪೋಷಕರು ಅಭಿಷೇಕ್ ಜತೆ ಮದುವೆಗೆ ನಿರಾಕರಿಸಿದ್ದಾರೆ. ಹೀಗಾಗಿ ಯುವತಿ ಅಭಿಷೇಕ್ನನ್ನು ಅವೈಡ್ ಮಾಡಲು ಶುರು ಮಾಡಿದ್ದಾಳೆ. ಇದರಿಂದ ಮನನೊಂದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಡೆತ್‌ನೋಟ್‌ನಲ್ಲಿ ಏನಿದೆ?
ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಸೂಸೈಡ್ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನನ್ನ ಜೊತೆ ಇದ್ದವಳು, ಅವಳಿಗೀಗ ಏನಾಯಿತೆಂದು ನನಗೆ ತಿಳಿಯುತ್ತಿಲ್ಲ. ನನ್ನ ಜೀವನ ಪ್ರೀತಿಯಿಂದಲೇ ತುಂಬಿ ತುಳುಕುತ್ತಿತ್ತು. ಈಗ ಆ ಪ್ರೀತಿಯೇ ಅಂತ್ಯವಾಗಿದೆ. ಆದ್ದರಿಂದ ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ. ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ. ನನ್ನ ಎಲ್ಲಾ ಸ್ನೇಹಿತರಿಗೆ ಗುಡ್ ಬೈ. ಆ ಪ್ರೀತಿಯ ಕಾರಣದಿಂದ ನಿಮಗೆಲ್ಲರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ಎಲ್ಲರೂ ನನ್ನನ್ನು ಪ್ರೀತಿಸುವುದರ ಜೊತೆಗೆ ನನ್ನೊಂದಿಗೆ ಸಂತೋಷವಾಗಿದ್ದರು. ಆದರೆ ನಾನು ನಿಮಗ್ಯಾರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ. ನನ್ನನ್ನು ಕ್ಷಮಿಸಿ ಎಂದು ಬರೆದುಕೊಂಡಿದ್ದಾನೆ

ನೋಡಿರಿ

