ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅನಾಹುತ – ರೈಲು ಬರುತ್ತಿದ್ದಾಗ  ಹಳಿಗೆ ಹಾರಿ ಯುವಕ ಆತ್ಮಹತ್ಯೆ

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅನಾಹುತ – ರೈಲು ಬರುತ್ತಿದ್ದಾಗ  ಹಳಿಗೆ ಹಾರಿ ಯುವಕ ಆತ್ಮಹತ್ಯೆ

ಸಿಲಿಕಾನ್‌ ಸಿಟಿ ಬೆಂಗಳೂರಿನ ನಮ್ಮ ಮೆಟ್ರೋ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗೆ ಮೆಟ್ರೋ ಸಿಬ್ಬಂದಿ ಮಹಿಳೆ ಮುಂದೆ ಅಸಭ್ಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿತ್ತು. ಇದೀಗ ಯುವಕನೊಬ್ಬ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: IPLಗೂ ಮುನ್ನ ದೇವರ ಮೊರೆ ಹೋದ ಕೆ.ಎಲ್‌ ರಾಹುಲ್​​ – IPLನಲ್ಲಿ ಭಕ್ತನ ಕೈಹಿಡಿತಾನಾ ಮಹಾಕಾಳೇಶ್ವರ..?

ಗುರುವಾರ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್​ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಮೆಟ್ರೋ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಟ್ರ್ಯಾಕ್​ಗೆ ಹಾರಿದ್ದಾನೆ. ಇದರಿಂದಾಗಿ ಆತ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಗಂಭೀರವಾಗಿ ಗಾಯಗೊಂಡಿದ್ದ ಆ ವ್ಯಕ್ತಿ ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ.  ಮೃತ ವ್ಯಕ್ತಿಯ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Shwetha M